ಅಪಾರ್ಟ್‌ಮೆಂಟ್‌ ನಿವಾಸಿಗಳ ಭೇಟಿ ಮಾಡಿದ ಸಚಿವ ಅಶ್ವತ್ಥ್ ನಾರಾಯಣ್, ಬಿಜೆಪಿಗೆ ಮತ ಹಾಕುವಂತೆ ಮನವಿ

ಸಲಾರ್‌ಪುರಿಯಾ, ಎಂಬಸಿ, ಬ್ರಿಗೇಡ್ ರೀಜೆನ್ಸಿ ಮತ್ತು ಶಶಿಕಿರಣ್ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳನ್ನು ಭೇಟಿ ಮಾಡಿದ ಉನ್ನತ ಶಿಕ್ಷಣ ಸಚಿವ ಹಾಗೂ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.
ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ ಅವರು ಮಲ್ಲೇಶ್ವರಂ ನಿವಾಸಿಗಳೊಂದಿಗೆ ಭಾನುವಾರ ಸಂವಾದ ನಡೆಸಿದರು.
ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ ಅವರು ಮಲ್ಲೇಶ್ವರಂ ನಿವಾಸಿಗಳೊಂದಿಗೆ ಭಾನುವಾರ ಸಂವಾದ ನಡೆಸಿದರು.

ಬೆಂಗಳೂರು: ಸಲಾರ್‌ಪುರಿಯಾ, ಎಂಬಸಿ, ಬ್ರಿಗೇಡ್ ರೀಜೆನ್ಸಿ ಮತ್ತು ಶಶಿಕಿರಣ್ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳನ್ನು ಭೇಟಿ ಮಾಡಿದ ಉನ್ನತ ಶಿಕ್ಷಣ ಸಚಿವ ಹಾಗೂ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

ಆದ್ಯತೆಯ ಮೇರೆಗೆ ಮಲ್ಲೇಶ್ವರಂ ಕ್ಷೇತ್ರಕ್ಕೆ ನೀರು ಪೂರೈಕೆ, ಆರೋಗ್ಯ ಮತ್ತು ಇತರ ಸೌಲಭ್ಯಗಳಂತಹ ನಾಗರಿಕ ಸೌಲಭ್ಯಗಳನ್ನು ತಲುಪಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

“ಬಡವರು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು, ಮಲ್ಲೇಶ್ವರಂನಲ್ಲಿರುವ ಎಲ್ಲಾ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಲ್ಲೇಶ್ವರಂನಲ್ಲಿದ್ದ ನೀರಿನ ಸೋರಿಕೆಯನ್ನು ಶೇ 45 ರಿಂದ ಶೇ 14.72 ಕ್ಕೆ ಇಳಿಸಲಾಗಿದೆ. ಇದರಿಂದ ಅಪಾರ್ಟ್‌ಮೆಂಟ್‌ಗಳಿಗೆ ನೀರು ಪೂರೈಸಲು ಸಹಾಯ ಮಾಡಿದೆ ಎಂದು ಹೇಳಿದರು.

ಮಲ್ಲೇಶ್ವರಂನ 18ನೇ ಕ್ರಾಸ್‌ನಲ್ಲಿ ನೀರಿನ ಕೊರತೆಯಾಗುತ್ತಿತ್ತು. ಇದನ್ನು ತಡೆದು ಸೋರಿಕೆ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿ 6 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಅಪಾರ್ಟ್‌ಮೆಂಟ್ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಕ್ತ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com