2023 ರಾಜ್ಯ ಅಸೆಂಬ್ಲಿ ಚುನಾವಣೆ; ಉಪ ಮುಖ್ಯ ಚುನಾವಣಾ ಆಯುಕ್ತರಿಂದ ಪೂರ್ವ ತಯಾರಿ ಪರಿಶೀಲನೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾ ಆಯುಕ್ತ ಅಜಯ್ ಭಾಡೂ ಮಂಗಳವಾರ ಪರಿಶೀಲಿಸಿದರು.
ಅಧಿಕಾರಿಗಳೊಂದಿಗೆ ಅಜಯ್ ಭಾಡೋ ಸಭೆ
ಅಧಿಕಾರಿಗಳೊಂದಿಗೆ ಅಜಯ್ ಭಾಡೋ ಸಭೆ
Updated on: 

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾ ಆಯುಕ್ತ ಅಜಯ್ ಭಾಡೂ ಮಂಗಳವಾರ ಪರಿಶೀಲಿಸಿದರು.

 ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಭಾಡೋ, ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ, ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು, ಚುನಾವಣೆಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳ ಮಾಹಿತಿ, SVEEP ಚಟುವಟಿಕೆಗಳೂ ಸೇರಿದಂತೆ ಇತರೆ ಪ್ರಚಾರ ಕಾರ್ಯಕ್ರಮಗಳು ಹಾಗೂ ಅವುಗಳ ಅನುಷ್ಠಾನದ ವ್ಯವಸ್ಥೆಗಳ ಬಗ್ಗೆ  ಚರ್ಚಿಸಿದರು.

ಚುನಾವಣೆ ಪೂರ್ವತಯಾರಿಯ ಭಾಗವಾದ ಎಪಿಕ್ ಕಾರ್ಡ್ ನ ಮುದ್ರಣ ಹಾಗೂ ವಿತರಣೆ, ಮತಗಟ್ಟೆಗಳು, ಮತಯಂತ್ರಗಳ ತರಬೇತಿ, ನಾಮನಿರ್ದೇಶನದ ಪ್ರಕ್ರಿಯೆ, ಮಾದರಿ ನೀತಿ ಸಂಹಿತೆ ಹಾಗೂ ಕಾನೂನು ವ್ಯವಸ್ಥೆಯ ಅನುಷ್ಠಾನ, ಮತಚೀಟಿಗಳ ವಿತರಣೆ, ಮತದಾನದ ದಿನದ ಪೂರ್ವತಯಾರಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದರು.

ನಂತರ ಸ್ವೀಪ್ ಕಾರ್ಯಕ್ರಮಗಳು, ಅಂಚೆ ಮತಪತ್ರಗಳು, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ರಾಜ್ಯ ಮತ್ತು ಜಿಲ್ಲಾಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದಿದೆ. ಒಂದು ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ಹಾಗೂ 28 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಅತಿ ದೊಡ್ಡ ನಗರವಾಗಿದೆ. ಬೆಂಗಳೂರು ನಗರದ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವ ತಯಾರಿಗಳ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತರು (ಚುನಾವಣೆ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ರಾಜ್ಯದ 34 ಚುನಾವಣಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿ ಜಿಲ್ಲಾಮಟ್ಟದಲ್ಲಿ ಕೈಗೊಳ್ಳಲಾಗಿರುವ ಚುನಾವಣೆಯ ಪೂರ್ವ ತಯಾರಿ, ಕಾನೂನು ಸುವ್ಯವಸ್ಥೆ, ಎಪಿಕ್ ಮುದ್ರಣ ಹಾಗೂ ವಿತರಣೆ, ಮಾದರಿ ನೀತಿ ಸಂಹಿತೆ ಅನುಷ್ಠಾನ, ಜಾಗೃತ ದಳಗಳ ನಿಯೋಜನೆ, ಮತಗಟ್ಟೆಗಳಿಗೆ ಸಿಬ್ಬಂದಿ ನಿಯೋಜನೆ  ಮತ್ತು ತರಬೇತಿ, ಸುವಿಧಾ, ಸಿ-ವಿಜಿಲ್ ಆಪ್ ಸೇರಿದಂತೆ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದು ಆಯೋಗದ ಕಾನೂನು ಪರಿಮಿತಿಯಲ್ಲಿ ಸುವ್ಯವಸ್ಥಿತವಾಗಿ ಚುನಾವಣೆಯನ್ನು ನಡೆಸುವಂತೆ ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com