ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಜಾಮೀನು ನೀಡಿದರೆ ತನಿಖೆ ವೇಳೆ ಅಧಿಕಾರಿಗಳಿಗೆ ಸಹಕಾರ ನೀಡಬಹುದು ಎಂಬ ಯಾವುದೇ ವಿಶ್ವಾಸ ಇಲ್ಲದಿರುವುದರಿಂದ ಬಿಡಬ್ಲ್ಯುಎಸ್ ಎಸ್ ಬಿ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಎಂ ವಿ ಪ್ರಶಾಂತ್ ಕುಮಾರ್ ಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ. 
ಮಾಡಾಳ್ ವಿರೂಪಾಕ್ಷಪ್ಪ
ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಜಾಮೀನು ನೀಡಿದರೆ ತನಿಖೆ ವೇಳೆ ಅಧಿಕಾರಿಗಳಿಗೆ ಸಹಕಾರ ನೀಡಬಹುದು ಎಂಬ ಯಾವುದೇ ವಿಶ್ವಾಸ ಇಲ್ಲದಿರುವುದರಿಂದ ಬಿಡಬ್ಲ್ಯುಎಸ್ ಎಸ್ ಬಿ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಎಂ ವಿ ಪ್ರಶಾಂತ್ ಕುಮಾರ್ ಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ. 

ಭ್ರಷ್ಟಾಚಾರ ಕೇಸಿನಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲಿನಲ್ಲಿರುವ ಪ್ರಶಾಂತ್ ಕುಮಾರ್ ಗೆ ನಿನ್ನೆ ಮತ್ತೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ.ಪ್ರಶಾಂತ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಧೀಶ ಬಿ ಜಯಂತ್ ಕುಮಾರ್, ಪ್ರಶಾಂತ್ ಕುಮಾರ್ ಸರಿಯಾಗಿ ತನಿಖೆಗೆ ಸಹಕರಿಸುತ್ತಿಲ್ಲ. ಯುನಿಸ್ಕ್ವಾರ್ ಬಿಲ್ಡರ್ಸ್ ಅಂಡ್ ಡೆವೆಲಪರ್ಸ್ ಪ್ರೈವೇಟ್ ಲಿಮಿಟೆಡ್ ನ ಕಚೇರಿಗೆ ಪ್ರಶಾಂತ್ ಯಾಕೆ ಹೋಗಿದ್ದರು ಎಂದು ಸರಿಯಾಗಿ ವಿವರಣೆ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಪ್ರಶಾಂತ್ ಕುಮಾರ್ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ.

ಡೆಲಿಸಿಯಾ ಕೆಮಿಕಲ್ಸ್ ಎಂಬ ಕಂಪೆನಿಗೆ ಟೆಂಡರ್ ನೀಡುವ ಪ್ರಕ್ರಿಯೆಯಲ್ಲಿ ಕರ್ನಾಟಕ ಸೋಪು ಮತ್ತು ಡಿಟರ್ಜೆಂಟ್ ಲಿಮಿಟೆಡ್ (KSDL) ಅಧ್ಯಕ್ಷರಾಗಿದ್ದ ತಮ್ಮ ತಂದೆ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ನಿರ್ದೇಶನದ ಮೇರೆಗೆ ಕಚೇರಿಯಲ್ಲಿ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಶಾಂತ್ ನನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಮಾಡಾಳ್ ವಿರೂಪಾಕ್ಷಪ್ಪ ನಂಬರ್ 1 ಆರೋಪಿಯಾಗಿದ್ದಾರೆ. 

ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಮಹೇಶ್ ಅವರು ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ ಹೇಳಿಕೆಯಲ್ಲಿ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸುವಲ್ಲಿ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ, ಪ್ರಶಾಂತ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಲೋಕಾಯುಕ್ತ ಪೊಲೀಸರು ಪ್ರತಿಪಾದಿಸಿದ್ದಾರೆ.

ಪ್ರಶಾಂತ್ ಸಾಕ್ಷ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಗೊತ್ತಾಗುತ್ತಿದೆ. ಅವರಿಂದ ತನಿಖಾಧಿಕಾರಿ ಡೈರಿಯೊಂದನ್ನು ಪಡೆದುಕೊಂಡಿದ್ದು ಅದರಲ್ಲಿ ಕೆಲವು ಬರಹಗಳಿವೆ ಹೊರತು ವಿವರಣೆಗಳಿಲ್ಲ. ವಿರೂಪಾಕ್ಷಪ್ಪ ಅವರ ಮಲಗುವ ಕೋಣೆಯಿಂದ ವಶಪಡಿಸಿಕೊಂಡ 6.10 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ವಾಟ್ಸಾಪ್ ಸಂದೇಶಗಳು ಮತ್ತು ಫೋನ್ ಕರೆಗಳ ವಿನಿಮಯದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಸಾಕ್ಷಿಗಳನ್ನು ತಿರುಚಲಾಗುತ್ತಿದೆ ಎಂಬ ಆತಂಕವಿದ್ದು, ಪ್ರಶಾಂತ್ ಬಿಡುಗಡೆಯಿಂದ ತನಿಖೆಗೆ ಅಡ್ಡಿಯಾಗಬಹುದು ಎಂದು ಹೇಳಿದ ನ್ಯಾಯಾಲಯ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸುರಕ್ಷಿತವಲ್ಲ ಎಂದು ಹೇಳಿದೆ. ಆದರೆ, ನ್ಯಾಯಾಲಯ ಸುರೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಸುರೇಶ್ ಆರೋಪಿ ನಂ. 3 ಪ್ರಶಾಂತ್ ಅವರ ಖಾಸಗಿ ಅಕೌಂಟೆಂಟ್ ಆಗಿದ್ದರು. ಅವರ ಸೂಚನೆಯಂತೆ ಪ್ರಶಾಂತ್ ಅವರ ವಾಹನದಲ್ಲಿ ಹಣ ಇಟ್ಟ ಆರೋಪ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com