ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್.
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.

ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರು ಇಂದು ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾಸ್ಕರ್ ರಾವ್ ಅವರು, ಜನರ ಬದುಕಿನಲ್ಲಿ ಬದಲಾವಣೆ ತರುವ ಅಗತ್ಯವಿದೆ. ನಗರ ಕೇಂದ್ರಗಳಲ್ಲಿ ಮತದಾನ ಪ್ರಮಾಣ ಕಡಿಮೆ ಇರುವುದರಿಂದ ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಲಾಗುತ್ತಿದೆ. ನಾನು ಪೊಲೀಸ್ ಕಮಿಷನರ್ ಆಗಿದ್ದಾಗ, ಸಂವಿಧಾನದ ಪ್ರಕಾರ ನಾನು ನನ್ನ ಬಲದೊಂದಿಗೆ ಜನರನ್ನು ರಕ್ಷಣೆ ಮಾಡಿದ್ದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com