ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ: ಮುಖ, ತಲೆಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.
ಬಾಬುರಾವ ಚಿಂಚನಸೂರ್
ಬಾಬುರಾವ ಚಿಂಚನಸೂರ್
Updated on

ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಕಲಬುರಗಿ ಆಕಾಶವಾಣಿ (ಎಐಆರ್) ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ಮಧ್ಯರಾತ್ರಿ 12.30 ರ ಅಪಘಾತ ಸಂಭವಿಸಿದ್ದು, ತಡರಾತ್ರಿ 2.30 ರ ವೇಳೆಗೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಾಲಕನಿಗೆ ಆಕಾಶವಾಣಿ ಕೇಂದ್ರ ಬಳಿ ರಸ್ತೆಯ ಮಧ್ಯೆ ಇರುವ ಗುಂಡಿ ಕಾಣದೆ ಕಾರು ಗುಂಡಿಯಲ್ಲಿ ಸಿಲುಕಿ ಸ್ಕಿಡ್ ಆಗಿದೆ. ಇದರಿಂದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಚಿಂಚನಸೂರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com