BWSSB ನಿರ್ಲಕ್ಷ್ಯಕ್ಕೆ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು: ಎಂಜಿನಿಯರ್, ಕಾಂಟ್ರ್ಯಾಕ್ಟರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ನಿರ್ಲಕ್ಷ್ಯಕ್ಕೆ ಎರಡೂವರೆ ವರ್ಷದ ಕಂದಮ್ಮ ಬಲಿಯಾದ ಘಟನೆ ಮಂಗಳವಾರ ನಡೆದಿದೆ.
ಬಿಡಬ್ಲ್ಯುಎಸ್ ಎಸ್ ಬಿ ಅಗೆದಿದ್ದ ಗುಂಡಿ
ಬಿಡಬ್ಲ್ಯುಎಸ್ ಎಸ್ ಬಿ ಅಗೆದಿದ್ದ ಗುಂಡಿ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳ ನಿರ್ಲಕ್ಷದಿಂದ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಕಾರ್ತಿಕ್ ಎಂಬ ಎರಡೂವರೆ ವರ್ಷದ ಮಗು ಬಿಡಬ್ಲ್ಯುಎಸ್‌ಎಸ್‌ಬಿ ಪೈಪ್‌ಲೈನ್ ಕಾಮಗಾರಿಗಾಗಿ ಅಗೆದ ಹೊಂಡಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ. 

ವೃತ್ತಿಯಲ್ಲಿ ಪೇಂಟರ್ ಆಗಿರುವ ಉತ್ತರ ಪ್ರದೇಶದಿಂದ ವಲಸೆ ಬಂದಿರುವ ಹನುಮಂತ ಅವರ ಮಗು ಮಾಗಡಿ ರಸ್ತೆಯ ದೊಡ್ಡಗೊಲ್ಲರಹಟ್ಟಿಯಲ್ಲಿ ಬೆಳಗ್ಗೆ 9.30ರ ಸುಮಾರಿಗೆ ಮನೆಯ ಹೊರಗೆ ಆಟವಾಡಲು ಹೋಗಿದೆ. ಹನುಮಂತ ಹೊರಗೆ ಕೆಲಸಕ್ಕೆ ಹೋಗಿದ್ದರು. ಬೆಳಿಗ್ಗೆ 10.30 ರ ಸುಮಾರಿಗೆ ಮಗು ಕಾರ್ತಿಕ್ ಅಗೆದ ಹೊಂಡದಲ್ಲಿ ಬಿದ್ದಿದೆ ಎಂದು ಹೆಂಡತಿಯಿಂದ ಕರೆ ಬಂದಿತು ಕೂಡಲೇ ಮನೆಗೆ ಬರುವಂತೆ ಹನುಮಂತಗೆ ಹೇಳಿದ್ದಾಳೆ. ಸ್ಥಳಕ್ಕಾಗಮಿಸಿ ಸುತ್ತಮುತ್ತಲಿನವರ ಸಹಾಯದಿಂದ ಮಗುವನ್ನು ಹೊರತೆಗೆದಾಗ ಪ್ರಜ್ಞೆ ಕಳೆದುಕೊಂಡಿತ್ತು. 

ತನ್ನ ಮಗುವಿನ ಸಾವಿಗೆ ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಕಾರಣ ಎಂದು ಹನುಮಂತನು BWSSB ಇಂಜಿನಿಯರ್ ಮತ್ತು ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

BWSSB ಅಧ್ಯಕ್ಷ ಜಯರಾಮ್ ಅವರನ್ನು ಸಂಪರ್ಕಿಸಿದಾಗ, ಘಟನೆಯ ಬಗ್ಗೆ ಈಗಾಗಲೇ ಸಂಬಂಧಪಟ್ಟ ಗುತ್ತಿಗೆದಾರನ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಂಬಂಧಪಟ್ಟ ಮುಖ್ಯ ಇಂಜಿನಿಯರ್‌ಗೆ ಸೂಚಿಸಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com