ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಿಂಗಾಯತ ಮತ್ತು ವೀರಶೈವರನ್ನು ವಿಭಜಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಜನರು ಮರೆತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬಾಗಲಕೋಟೆ: ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಿಂಗಾಯತ ಮತ್ತು ವೀರಶೈವರನ್ನು ವಿಭಜಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಜನರು ಮರೆತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಲಿಂಗಾಯತರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ವಿರೋಧ ಮಾಡಿತ್ತು. 2009 ರಲ್ಲಿ 2ಎ ಸೇರಿಸಲು ವಿರೋಧಿಸಿ, 2016ರಲ್ಲಿ ಅದನ್ನು ತಿರಸ್ಕಾರ ಮಾಡಿದ್ದರು. ನಾವು 2ಡಿ ವರ್ಗ ರಚನೆ ಮಾಡಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ಧೇವೆ. ಈಗ ಪರೋಕ್ಷವಾಗಿ ಕುಮ್ಮಕ್ಕು ನೀಡಿ ಸುಪ್ರಿಂ ಕೋರ್ಟ್ ನಲ್ಲಿ ಪ್ರಶ್ನಿಸಿ ಕೇಸ್ ಹಾಕಿದ್ದಾರೆ. ಲಿಂಗಾಯತರ ಪ್ರತಿಯೊಂದು ಅಭಿವೃದ್ಧಿಯಲ್ಲೂ ಕಾಂಗ್ರೆಸ್ ವಿರೋಧ ಮಾಡಿದೆ. ಸಿದ್ದರಾಮಯ್ಯ ಕಾಲದಲ್ಲಿ ಇದ್ದ ಜಿಲೇಬಿ ಫೈಲ್ ಯಾರೂ ಮರೆಯಲ್ಲ ಎಂದು ಹೇಳಿದರು.

ಲಿಂಗಾಯತರ ಪ್ರತಿಯೊಂದು ಬೆಳವಣಿಗೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಚಾಲ್ತಿಯಲ್ಲಿದ್ದ ‘ಜಲೇಬಿ’ ಕಡತ ತೆರವು ಯಾರೂ ಮರೆತಿಲ್ಲ. "ಜಲೇಬಿ ಕಡತಗಳು ಗೌಡರು, ಲಿಂಗಾಯತರು ಮತ್ತು ಬ್ರಾಹ್ಮಣರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.

ಕೃಷ್ಣ ವಿಚಾರದಲ್ಲಿ ಏನು ಮಾಡಿದ್ದೀರಿ. ಒಂದು ಎಕರೆ ಭೂಮಿಗೆ ನೀರು ಕೊಡುವುದಕ್ಕೆ ಆಗಲಿಲ್ಲ. ಇಲ್ಲಿ ಯಾವ ರೀತಿಯ ರೈತರಿದ್ದಾರೆ. ಹೀಗಾಗಿ ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಆಡಳಿತಾತ್ಮಕವಾಗಿ ಯಾರು ಇದ್ದಾರೆ ಅನ್ನುವುದನ್ನು ಹಾಗೂ ಮಂತ್ರಿಮಂಡಲದಲ್ಲಿ ಎಷ್ಟು ಜನರು ಇದ್ದಾರೆ ಎನ್ನುವುದನ್ನು ಜನರು ಗಮಿನಿಸುತ್ತಾರೆ.  ಎಲ್ಲಕ್ಕಿಂತ ಹೆಚ್ಚಾಗಿ 1967ರ ನಂತರ ವೀರೇಂದ್ರ ಪಾಟೀಲರನ್ನು ಬಿಟ್ಟರೆ, ಬೇರೆ ಯಾರು ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಾಗಿಲ್ಲ. ಅವರನ್ನು ಕೂಡು ಅತ್ಯಂತ ಹೀನಾಯವಾಗಿ ನಡೆಸಿಕೊಂಡರು. ರಾಜಶೇಖರಮೂರ್ತಿ, ವಿರೂಪಾಕ್ಷಪ್ಪನವರ ಕಥೆ ಏನಾಯಿತು. ಈಗ ಎಸ್. ಆರ್ ಪಾಟೀಲರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನ, ಸಭಾಪತಿ ಸ್ಥಾನವನ್ನು ತಪ್ಪಿಸಿದರು ಎಂದರು.

ಈ ಭಾಗದ ಅಭಿವೃದ್ಧಿಯಾಗಿದ್ದು ಬಿಜೆಪಿಯಿಂದ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಅಭಿವೃದ್ಧಿ ಮಾಡಿ ಸಾಮಾಜಿಕ ನ್ಯಾಯವನ್ನು ಬಿಜೆಪಿ ಪಕ್ಷ ಕೊಟ್ಟಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾರೇ ಹೋದರು ಯಾವುದೇ ಪರಿಣಾಮ ಆಗುವುದಿಲ್ಲ. ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಒಬ್ಬರ ಹಿಡಿತದಲ್ಲಿ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ನಮ್ಮ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ. ಬಿಜೆಪಿ ಸರ್ವೊಚ್ಚ ನಾಯಕ ಮೋದಿ ನೇತೃತ್ವದಲ್ಲಿ ಪ್ರಜಾಪ್ರಭುತ್ವದ ಮೇಲಿದೆ. ಆರೋಪ ಮಾಡುತ್ತಿರುವವರು ಈ ಹಿಂದೆ ಒಂದು ಕೇಂದ್ರ ಆಗಿದ್ದರಲ್ಲವೇ ಎಂದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದ ಬೊಮ್ಮಾಯಿ, ಅದು ನೀಡಿದ ಗ್ಯಾರಂಟಿ ಕಾರ್ಡ್‌ಗಳಿಗೆ ಬೆಲೆ ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com