ಬಸವ ಜಯಂತಿ: ಬಸವಣ್ಣನ ಪ್ರತಿಮೆಗೆ ಸಿಎಂ ಬೊಮ್ಮಾಯಿ, ಸಚಿವ ಆರ್, ಅಶೋಕ್ ಗೌರವಾರ್ಪಣೆ

12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ಬಸವ ಜಯಂತಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿರುವ ಸಿಎಂ ಬೊಮ್ಮಾಯಿ.
ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿರುವ ಸಿಎಂ ಬೊಮ್ಮಾಯಿ.
Updated on

ಬೆಂಗಳೂರು: 12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ಬಸವ ಜಯಂತಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಬಸವ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿರುವ ಬಸವ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಆರ್.ಅಶೋಕ್ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿಗಳು, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು. ಕಾಯಕ ಮತ್ತು ದಾಸೋಹದೊಂದಿಗೆ ಸಮಾನತೆ ಹಾಗೂ ಜೀವನದ ಸತ್ಯದರ್ಶನದ ಮಹತ್ವವನ್ನು ಸಾರಿ, ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಅಣ್ಣ ಬಸವಣ್ಣನವರ ವಚನಾದರ್ಶಗಳನ್ನು ನಿತ್ಯ ಜೀವನದಲ್ಲಿ ಪಾಲಿಸುವ ಸಂಕಲ್ಪವನ್ನು ಮಾಡೋಣ ಎಂದು ಹೇಳಿದ್ದರು.

ಅಲ್ಲದೆ, ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯದ ಹಾರ್ದಿಕ ಶುಭಾಶಯಗಳು ಎಂದು ಹೇಳಿ, ಪ್ರತಿಯೊಬ್ಬರ ಜೀವನ ಬೆಳಗಲಿ, ಪ್ರತಿ ಮನೆಯಲ್ಲಿಯೂ ಸಮೃದ್ಧಿ ತುಂಬಿ ತುಳುಕಲಿ ಎಂದು ಹಾರೈಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com