ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಸ್ಫೋಟ ಪ್ರಕರಣ; ಇಬ್ಬರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

2013ರ ಬೆಂಗಳೂರು ಬಿಜೆಪಿ ಕಚೇರಿ ಬಳಿಯ ಸ್ಫೋಟ ಪ್ರಕರಣದಲ್ಲಿ ಇಬ್ಬರಿಗೆ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: 2013ರ ಬೆಂಗಳೂರು ಬಿಜೆಪಿ ಕಚೇರಿ ಬಳಿಯ ಸ್ಫೋಟ ಪ್ರಕರಣದಲ್ಲಿ ಇಬ್ಬರಿಗೆ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 

ಅವರನ್ನು ತಮಿಳುನಾಡಿನ ತಿರುನಲ್ವೇಲಿ ಮೂಲದ ಡೇನಿಯಲ್ ಪ್ರಕಾಶ್ (37) ಮತ್ತು ಸೈಯದ್ ಅಲಿ (36) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಈ ಇಬ್ಬರು 21 ಹಾಗೂ 23ನೇ ಆರೋಪಿಗಳಾಗಿದ್ದಾರೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಬಂಧನವನ್ನು ಜೈಲು ಶಿಕ್ಷೆಯ ಅವಧಿಗೆ ವಿರುದ್ಧವಾಗಿ ಹೊಂದಿಸಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಧೀಶ ಸಿ.ಎಂ. ಗಂಗಾಧರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಕೃತ್ಯವೆಸಗಿರುವುದಾಗಿ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ನ್ಯಾ. ಗಂಗಾಧರ್ ಅವರು ಶಿಕ್ಷೆ ವಿಧಿಸಿ‌ ಆದೇಶಿಸಿದರು.

ಅಪರಾಧಿಗಳು ಸ್ಫೋಟಕ್ಕೆ ಪ್ರತ್ಯಕ್ಷವಾಗಿ ಕಾರಣವಾಗಿಲ್ಲ. ಅವರು ಸ್ಫೋಟಕ್ಕೆ ಯತ್ನಿಸಿಲ್ಲ ಮತ್ತು ತನಿಖಾಧಿಕಾರಿ ಕೂಡ ಅವರಿಂದ ಯಾವುದೇ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. ಆದರೆ, ಅವರು ಹಣಕ್ಕಾಗಿ ಜಿಲೆಟಿನ್ ಸ್ಟಿಕ್‌ಗಳು ಮತ್ತು ಡಿಟೋನೇಟರ್‌ಗಳನ್ನು ಆರೋಪಿ ಸಂಖ್ಯೆ 16 ಗೆ ಸರಬರಾಜು ಮಾಡಿದ್ದರು. ಅವುಗಳನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತದೆ ಎಂಬುದು ಅವರಿಗೆ ತಿಳಿದಿತ್ತು. ಈ ಆರೋಪಗಳು ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಕಾರಣವಾಗುತ್ತವೆ ಎಂದು ನ್ಯಾಯಾಲಯ ಹೇಳಿದೆ.

ಐಪಿಸಿಯ ಸೆಕ್ಷನ್ 121 ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯ ಸೆಕ್ಷನ್ 16 ರ ಅಡಿಯಲ್ಲಿ ಅಪರಾಧಕ್ಕಾಗಿ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಪ್ರಾಸಿಕ್ಯೂಷನ್ ರಾಜ್ಯ ಸರ್ಕಾರದಿಂದ ಅನುಮತಿಯನ್ನು ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮಂಜೂರಾತಿ ಇಲ್ಲದಿದ್ದಲ್ಲಿ, ಈ ನ್ಯಾಯಾಲಯವು ವಿಚಾರಣೆಯ ಮುಕ್ತಾಯದ ನಂತರವೂ ಈಗ ಹೇಳಲಾದ ಅಪರಾಧಗಳಿಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲು ಮತ್ತು ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದಿದೆ. 

2013ರ ಏಪ್ರಿಲ್ 17ರಂದು ಬೆಳಗ್ಗೆ 10.20ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿ ಎದುರು ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹನ್ನೆರಡು ಪೊಲೀಸರು ಮತ್ತು ಆರು ನಾಗರಿಕರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಹಲವಾರು ವಾಹನಗಳಿಗೆ ಹಾನಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com