ಗದಗ: ಬಿಜೆಪಿ ಪರ ನಟ ಭುವನ್, ನಟಿ ಹರ್ಷಿಕಾ ಪ್ರಚಾರ!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಗದಗ ಜಿಲ್ಲೆಯಲ್ಲಿ ಸ್ಯಾಂಡಲ್ ವುಡ್ ತಾರೆಗಳು ಕಣಕ್ಕಿಳಿದಿದ್ದಾರೆ.
ಪ್ರಚಾರದಲ್ಲಿ ತೊಡಗಿರುವ ನಟ ಭುವನ್.
ಪ್ರಚಾರದಲ್ಲಿ ತೊಡಗಿರುವ ನಟ ಭುವನ್.
Updated on

ಗದಗ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಗದಗ ಜಿಲ್ಲೆಯಲ್ಲಿ ಸ್ಯಾಂಡಲ್ ವುಡ್ ತಾರೆಗಳು ಕಣಕ್ಕಿಳಿದಿದ್ದಾರೆ.

ಗದಗ ಕ್ಷೇತ್ರದಿಂದ ಕಾಂಗ್ರೆಸ್‌ನ ಹೆಚ್‌ಕೆ ಪಾಟೀಲ್ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ಪ್ರಚಾರ ನಟ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ಅವರು ಪ್ರಚಾರಕ್ಕಿಳಿದಿದ್ದಾರೆ.

ಸೊರ್ತೂರು, ಹಂಗನಕಟ್ಟಿ, ಅಂತೂರು ಬೆಂತೂರಿನಲ್ಲಿ ಭುವನ್ ಹಾಗೂ ಹರ್ಷಿಕಾ ಪ್ರಚಾರ ನಡೆಸುತ್ತಿದ್ದಾರೆ.

ಇಲ್ಲಿನ ಜನರು ಅದರಲ್ಲೂ ಯುವಕರು ತಮ್ಮ ನೆಚ್ಚಿನ ನಟ ಹಾಗೂ ನಟಿಯನ್ನು ಭೇಟಿಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಭುವನ್ ಹಾಗೂ ಹರ್ಷಿಕಾ ಗ್ರಾಮೀಣ ಪ್ರದೇಶದಲ್ಲಿರುವ ಪ್ರತೀ ಮನೆ ಮನೆಗೆ ಭೇಟಿ ನೀಡಿ ಮೆಣಸಿನಕಾಯಿ ಪರ ಮತಯಾಚನೆ ಮಾಡಿದರು.

ವಲಸೆ ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಮೆಣಸಿನಕಾಯಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂದು ಮತದಾರರಿಗೆ ತಿಳಿಸಿದರು.

ಗದಗ ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳಿಗೆ ಇಂದಿಗೂ ಸರಿಯಾದ ರಸ್ತೆಗಳಿಲ್ಲ, ಮೆಣಸಿನಕಾಯಿ ಅವರನ್ನು ಆಯ್ಕೆ ಮಾಡಿದರೆ ಈ ಸಮಸ್ಯೆ ಬಗೆಹರಿಸುವುದಾಗಿ ಭುವನ್ ಹೇಳಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಅವರು, 'ನನ್ನ ಪರ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ ನನ್ನ ಸ್ನೇಹಿತರಾದ ಭುವನ್ ಮತ್ತು ಹರ್ಷಿಕಾ ಅವರಿಗೆ ಧನ್ಯವಾದ ಹೇಳುತ್ತೇನೆ. ಜನರು ಅವರನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಇಬ್ಬರು ತಾರೆಯರು ಉದ್ಯೋಗ ಸೃಷ್ಟಿಯ ನನ್ನ ದೃಷ್ಟಿಕೋನವನ್ನು ಗ್ರಾಮಸ್ಥರಿಗೆ ವಿವರಿಸುವ ಮೂಲಕ ನನ್ನ ಕೆಲಸವನ್ನು ಸುಲಭಗೊಳಿಸುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com