'ಸಿದ್ದರಾಮಯ್ಯ ಸೋಲಿಸಲು ಬಿಎಸ್‌ಪಿ, ಎಎಪಿ ಅಭ್ಯರ್ಥಿಗಳನ್ನು ಜೆಡಿಎಸ್‌ ಕಣಕ್ಕಿಳಿಸಿದೆ': ಡಿಎಸ್ಎಸ್ ಆರೋಪ

ದೇಶದಲ್ಲಿ ಬಿಜೆಪಿ ತನ್ನ ಒಂಬತ್ತು ವರ್ಷಗಳ ದುರಾಡಳಿತದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿ ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸಿದೆ. ಹೀಗಾಗಿ ಜನ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ಕಳುಹಿಸುವ ಕಾಲ ಬಂದಿದೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ದೇಶದಲ್ಲಿ ಬಿಜೆಪಿ ತನ್ನ ಒಂಬತ್ತು ವರ್ಷಗಳ ದುರಾಡಳಿತದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿ ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸಿದೆ. ಹೀಗಾಗಿ ಜನ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ಕಳುಹಿಸುವ ಕಾಲ ಬಂದಿದೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಬುಧವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ದೇವಗಳ್ಳಿ ಸೋಮಶೇಖರ್, ಮೀಸಲಾತಿ ಹೆಸರಿನಲ್ಲಿ ಬಿಜೆಪಿ ಕೊಳಕು ರಾಜಕಾರಣ ಮಾಡುತ್ತಿದೆ. "ಈ ವಿಷಯವನ್ನು ಮುಂಚೂಣಿಯಲ್ಲಿಟ್ಟುಕೊಂಡು ತನ್ನ ಮತ  ಗಳಿಸಲು ಪ್ರಯತ್ನಿಸುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು, ನಾವು ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಎಎಪಿ, ಮತ್ತು ಬಿಎಸ್‌ಪಿಗೆ ಪ್ರಬಲ ಮತ ಇಲ್ಲದಿದ್ದರೂ ದಲಿತರ ಮತಗಳನ್ನ ವಿಭಜಿಸಲು ಮತ್ತು ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಸಹಾಯ ಮಾಡಲು ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕಿಳಿಸಿದೆ ಎಂದು ಆರೋಪಿಸಿದ್ದಾರೆ.

ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ಬದಲಿಸುವ ಮೂಲಕ ದಲಿತರ ಮತಗಳನ್ನು ವಿಭಜಿಸಲು ಜೆಡಿಎಸ್ ಬಿಜೆಪಿಯೊಂದಿಗೆ ಷಡ್ಯಂತ್ರ ನಡೆಸಿದೆ. ದಲಿತರು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರು ಸರಿಯಾಗಿ ಮತ ಚಲಾಯಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಅವರು ಹೇಳಿದರು.

‘ಪ್ರಮಾಣವಚನ ಸ್ವೀಕರಿಸಿದವರಿಗೆ ಟಿಕೆಟ್’

ಮೈಸೂರು: ಬಹುಜನ ಸಮಾಜ ಪಕ್ಷದಲ್ಲಿ (ಬಿಎಸ್‌ಪಿ) ಪ್ರಮಾಣ ವಚನ ಸ್ವೀಕರಿಸಿದವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ ಎಂದು ಹೇಳಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಜಯಶಂಕರ್ ಗುರುವಾರದಿಂದ ಪ್ರಚಾರ ಆರಂಭಿಸಿದ್ದಾರೆ. ಬಿಎಸ್‌ಪಿಯಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಈ ಬಾರಿ ಟಿಕೆಟ್ ನೀಡಲಾಗಿದೆ ಎಂದು ಜಯಶಂಕರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com