![ದರ್ಶನ್ ತೂಗುದೀಪ](http://media.assettype.com/kannadaprabha%2Fimport%2F2023%2F4%2F28%2Foriginal%2Fda.jpg?w=480&auto=format%2Ccompress&fit=max)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಹಲವು ಕ್ಷೇತ್ರಗಳಲ್ಲಿ ಭರ್ಜರಿ ರೋಡ್ ಶೋ, ಪ್ರಚಾರ ನಡೆಸುತ್ತಿದ್ದಾರೆ. ಅವರು ಹೋದಲ್ಲೆಲ್ಲಾ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಜನರು ಜಮಾಯಿಸಿ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಿಚ್ಚ ಸುದೀಪ್ ಸ್ಟಾರ್ ಪ್ರಚಾರಕರಾಗಿದ್ದಾರೆ.
ಇದೀಗ ಮತ್ತೊಬ್ಬ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಎಂಟ್ರಿಯಾಗಿದೆ. ಇಂದು ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಅವರ ಕಾರ್ಯಕ್ರಮದ ವಿವರಗಳನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದೆ.
Advertisement