ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ: ಎಚ್.ಡಿ.ದೇವೇಗೌಡ

ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.
ಹೆಚ್.ಡಿ.ದೇವೇಗೌಡ.
ಹೆಚ್.ಡಿ.ದೇವೇಗೌಡ.
Updated on

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.

 ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಇತರ ಹಲವು ನಾಯಕರು ಜೆಡಿಎಸ್ ನಾಯಕ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆಂದು ಹೇಳಿದರು.

ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್ ಪರ ಮಿತ್ರಪಕ್ಷಗಳು ಪ್ರಚಾರ ನಡೆಸಲಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದರು.

ಬಳಿಕ ಜೆಡಿಎಸ್ ಕೇವಲ 10-15 ಸ್ಥಾನಗಳನ್ನು ಗೆಲ್ಲಬಹುದು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಅವರಿಗೆ (ಜೋಶಿ) ಪ್ರತಿಕ್ರಿಯಿಸುವ ಸ್ವಾತಂತ್ರ್ಯವಿದೆ. ನಾವು ಕೇವಲ 25 ಸ್ಥಾನಗಳಿಗೆ ಸೀಮಿತವಾಗುತ್ತೇವೆ ಎಂದು ಕಾಂಗ್ರೆಸ್ ಕೂಡ ಹೇಳುತ್ತಿದೆ. ಆದರೆ, ಜನರು ಈ ಹೇಳಿಕೆಗಳಿಗೆ ಮೇ 10 ರಂದು ಉತ್ತರಿಸುತ್ತಾರೆಂದು ತಿಳಿಸಿದರು.

ಇದೇ ವೇಳೆ ಮಂಡ್ಯದಲ್ಲಿ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಂಸದ ಶಂಕರೇಗೌಡ ಅವರ ಮೊಮ್ಮಗನ ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ಪಕ್ಷವು ಪ್ರಮುಖ ಪಾತ್ರ ವಹಿಸಿದೆ ಮತ್ತು ಪಕ್ಷದ ಕೊಡುಗೆ ಮತ್ತು ಸಾಧನೆಯ ಆಧಾರದ ಮೇಲೆ ಪಕ್ಷಕ್ಕೆ ಮತ ನೀಡುವಂತೆ ನಗರದ ಮತದಾರರಿಗೆ ಮನವಿ ಮಾಡಿಕೊಳ್ಳುವುದಾಗಿ ದೇವೇಗೌಡ ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com