
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಇದ್ದ ಹಾಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಬೆಯಲ್ಲಿ ಮಾತನಾಡಿದ ಅವರು, ಮೋದಿ ಅವರ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತಾಡುವ ಧೈರ್ಯ ಮಾಡಿಲ್ಲ ಆದರೆ ಖರ್ಗೆ ಈ ರೀತಿ ಮಾತನಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಒಬ್ಬ ಹಿರಿಯ ನಾಯಕ ಈ ರೀತಿ ಮಾತಾಡಬಾರದು. ಖರ್ಗೆ ಹೇಳಿಕೆಯನ್ನು ಜನ ಕ್ಷಮಿಸಬಹುದು. ದೇವರಂತೂ ಕ್ಷಮಿಸುವುದಿಲ್ಲ. ಅವರ ಹೇಳಿಕೆ ಯಾರಿಗೂ ಶೋಭೆ ತರುವಂತಹದಲ್ಲ. ನಿಂತಲ್ಲಿ ಕುಳಿತಲ್ಲಿ ಅವರ ಮಾತಿನ ಬಗ್ಗೆ ಚರ್ಚೆ ಆಗುತ್ತಿದೆ' ಖರ್ಗೆ ಪರವಾಗಿ ಕಾಂಗ್ರೆಸ್ ಇಡೀ ದೇಶದ ಜನರ ಕ್ಷಮೆ ಕೋರಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.
Advertisement