ವಿಧಾನಸಭಾ ಚುನಾವಣೆ: ರಾಜ್ಯದಲ್ಲಿ ಒಟ್ಟು 305 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ

ರಾಜ್ಯ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿದಂತೆ ಎಲ್ಲ ತಂಡಗಳು ಒಟ್ಟು ರೂ. 305 ಕೋಟಿ ಮೌಲ್ಯದ ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿದಂತೆ ಎಲ್ಲ ತಂಡಗಳು ಒಟ್ಟು ರೂ. 305 ಕೋಟಿ ಮೌಲ್ಯದ ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ. 

110 ಕೋಟಿ ನಗದು, 74 ಕೋಟಿ ರೂ. ಮೌಲ್ಯದ ಮದ್ಯ, 81 ಕೋಟಿ ರೂ.ಮೌಲ್ಯದ ಚಿನ್ನಾಭರಣ, ರೂ. 22 ಕೋಟಿ ಮೌಲ್ಯದ ಉಚಿತ ಕೊಡುಗೆ, ಉಡುಗೊರೆ ವಸ್ತುಗಳು, 18 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ. ವಶಕ್ಕೆ ಪಡೆಯಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ  2,346 ಕ್ಕೂ ಅಧಿಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮೇ 10 ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಮಾರ್ಚ್ 9 ರಿಂದ 27ರ ಅವಧಿಯಲ್ಲಿ ಒಟ್ಟು 58 ಕೋಟಿ ವಶಕ್ಕೆ ಪಡೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com