ಜಯನಗರ ಆಸ್ಪತ್ರೆಗೆ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ: ಸ್ವಚ್ಛತೆ ಕೊರತೆ ಸಂಬಂಧ ಅಧಿಕಾರಿಗಳಿಗೆ ತರಾಟೆ

ಸಾರ್ವಜನಿಕರ ಸಾಲು ಸಾಲು ದೂರುಗಳ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆ ದುರಸ್ತಿ, ಚಿಕಿತ್ಸೆ ಬಗ್ಗೆ ಇಂದು ಪರೀಶಿಲನೆ ನಡೆಸಿದರು.
ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯಕೀಯ ಉಪಕರಣಗಳನ್ನು ಪರಿಶೀಲಿಸಿದರು.
ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯಕೀಯ ಉಪಕರಣಗಳನ್ನು ಪರಿಶೀಲಿಸಿದರು.

ಬೆಂಗಳೂರು: ಸಾರ್ವಜನಿಕರ ಸಾಲು ಸಾಲು ದೂರುಗಳ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆ ದುರಸ್ತಿ, ಚಿಕಿತ್ಸೆ ಬಗ್ಗೆ ಇಂದು ಪರೀಶಿಲನೆ ನಡೆಸಿದರು.

ಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ ಅವ್ಯವಹಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸೋಮವಾರ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯಲ್ಲಿ ಸ್ವಚ್ಛತೆ ಕೊರತೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸರಕಾರದಿಂದ ಆಸ್ಪತ್ರೆಗೆ ಹಣ ಮಂಜೂರು ಮಾಡದಿದ್ದರೆ ಆವರಣ ಏಕೆ ಸ್ವಚ್ಛವಾಗಿಲ್ಲ ಎಂದು ಸಿಬ್ಬಂದಿಯನ್ನು ಪ್ರಶ್ನಿಸಿದರು. ಸಮಸ್ಯೆಗಳು ಕಂಡು ಬಂದಲ್ಲಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಣವನ್ನು ಒದಗಿಸಲಾಗಿದೆ ಆದರೆ ಆವರಣವನ್ನು ಸ್ವಚ್ಛವಾಗಿಡಲು ತೊಡಗಿರುವ ಖಾಸಗಿ ಏಜೆನ್ಸಿ ಕೆಲಸ ಆರಂಭಿಸಿಲ್ಲ ಎಂದು ಸಿಬ್ಬಂದಿಯೊಬ್ಬರು ವಿವರಿಸಲು ಪ್ರಯತ್ನಿಸಿದಾಗ, ಅಲ್ಲಿಯವರೆಗೆ ಆಸ್ಪತ್ರೆಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕಲ್ಲವೇ? ಎಂದು ಗುಂಡೂರಾವ್  ಆಸ್ಪತ್ರೆಯ ಅಧಿಕಾರಿಗಳನ್ನು ಪ್ರಶ್ನಿಸಿದರು.

ಅವರು ವಾರ್ಡ್‌ಗಳಲ್ಲಿ ಸಂಚರಿಸಿ ಕೆಲವು ಒಳರೋಗಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.  ತಪಾಸಣೆ ಮುಗಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗುಂಡೂರಾವ್, ಆಸ್ಪತ್ರೆಗಳ ವಿರುದ್ಧ ಸಾಕಷ್ಟು ದೂರುಗಳಿವೆ. ವೈದ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ, ರೋಗಿಗಳಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಿಲು ಸೂಚಿಸಿದರು. ಆಸ್ಪತ್ರೆಯ ಸ್ಥಿತಿಗತಿಗಳ ಕುರಿತು ಖುದ್ದು ಮಾಹಿತಿ ಪಡೆಯಲು  ನಿರ್ಧರಿಸಿರುವ ಅವರು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಂಗಾಂಗ ಕಳವು ಮತ್ತು ಅನಾಥ ಶವಗಳ ಮಾರಾಟಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಹೇಳುತ್ತಿರುವವರು ಅಗತ್ಯ ಸಾಕ್ಷ್ಯಗಳನ್ನು ಸಲ್ಲಿಸಬಹುದು ಮತ್ತು ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಹೇಳಿದರು.

ಆದಷ್ಟು ಬೇಗ ಕಟ್ಟಡ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ದಿನೇಶ್ ಗುಂಡೂರಾವ್ ರಾವ್ ಜೊತೆ ಆಸ್ಪತ್ರೆ ಪರೀಶಿಲನೆಗೆ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಕೂಡ ಜೊತೆಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com