ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಸಚಿವ ಈಶ್ವರ ಖಂಡ್ರೆ

ಪಶ್ಚಿಮ ಘಟ್ಟಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದೆ. ಆದರೆ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಬದ್ಧ ಎಂದು ಹೇಳಿಲ್ಲ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ
Updated on

ಬೆಂಗಳೂರು: ಪಶ್ಚಿಮ ಘಟ್ಟಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದೆ. ಆದರೆ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಬದ್ಧ ಎಂದು ಹೇಳಿಲ್ಲ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಏಟ್ರಿಯಾ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಜುಲೈ 28ರಂದು ನಡೆದ ಅಂತರ ಜೀವಿ ಪ್ರಭೇದ ಸಮಾವೇಶದಲ್ಲಿನ ತಮ್ಮ ಭಾಷಣದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸೋಮವಾರ ಪತ್ರಿಕಾ ಹೇಳಿಕೆ ಮೂಲಕ ಸಚಿವರು ಅಲ್ಲಗಳೆದರು.

‘ಆ ಕಾರ್ಯಕ್ರಮದಲ್ಲಿದ್ದ ಕೆಲವರು ಕಸ್ತೂರಿರಂಗನ್‌ ವರದಿ ಕುರಿತಂತೆ ನನ್ನನ್ನು ಪ್ರಶ್ನಿಸಿದರು. ಕೇಂದ್ರ ಸರ್ಕಾರ ನೇಮಿಸಿರುವ ಸಂಜಯ್‌ ಕುಮಾರ್‌ ನೇತೃತ್ವದ ಪುನರ್‌ ಪರಿಶೀಲನಾ ಸಮಿತಿ ಡಿಸೆಂಬರ್‌ ವೇಳೆಗೆ ವರದಿ ಸಲ್ಲಿಸಲಿದೆ. ಆ ಬಳಿಕ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು. ನಂತರ ಈ ವರದಿಯ ವಿಚಾರದಲ್ಲಿ ಸರ್ಕಾರ ನಿರ್ಧಾರಕ್ಕೆ ಬರಲಿದೆ ಎಂದಷ್ಟೇ ಹೇಳಿದ್ದೆ ಎಂದು ಹೇಳಿದರು.

ಕಸ್ತೂರಿರಂಗನ್‌ ವರದಿ ಹತ್ತು ವರ್ಷಗಳಷ್ಟು ಹಳೆಯದು. ಅದು ಈಗ ಪ್ರಸ್ತುತವೇ ಎಂಬ ಪ್ರಶ್ನೆಯೂ ಇದೆ. ವರದಿ ಬಗ್ಗೆ ಪಶ್ಚಿಮ ಘಟ್ಟಗಳ ಪ್ರದೇಶದ ಜನರಲ್ಲಿ ಭೀತಿ ಇದೆ. ಇದೊಂದು ಸೂಕ್ಷ್ಮ ವಿಷಯ. ಈ ವಿಚಾರದಲ್ಲಿ ಸರ್ಕಾರ ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಪಶ್ಚಿಮ ಘಟ್ಟದಲ್ಲಿ ಕೆಂಪು ಪ್ರವರ್ಗದ ಕೈಗಾರಿಕೆಗಳು ನಡೆಯಬಾರದು, ಅದರ ತ್ಯಾಜ್ಯ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಅಪಾಯ ತಂದೊಡ್ಡುತ್ತದೆ ಎಂಬ ಆತಂಕ ಇದೆ. ಅದು ಸರಿ ಎನಿಸುತ್ತದೆ. ಆದರೆ, ಅಂಗನವಾಡಿ, ಆಸ್ಪತ್ರೆ, ಶಾಲೆ, ಜನವಸತಿ, ಮೂಲಸೌಕರ್ಯ ವಿಚಾರದಲ್ಲಿ ಹಾಗೆ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಇದರಿಂದ ಹಲವು ದಶಕದಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತದೆ. ಪರಿಸರವೂ ಉಳಿಯಬೇಕು, ಜನರ ಜೀವನೋಪಾಯಕ್ಕೂ ಧಕ್ಕೆ ಆಗಬಾರದು, ಸುಸ್ಥಿರ ಅಭಿವೃದ್ಧಿ ಸರ್ಕಾರದ ನಿಲುವು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com