

ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮದ್ಯದ ಅಮಲಿನಲ್ಲಿ ಟ್ಯಾಂಕರ್ ವಾಹನವನ್ನು ಚಾಲಕ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಪರಿಣಾಮ ಬಯೋಕಾನ್ ಕಂಪನಿ ಮುಂಭಾಗದಲ್ಲಿ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಆಶಿಕ್ ಮತ್ತು ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ನಂತರ ಟ್ಯಾಂಕರ್ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣಾ ಪೊಲೀಸರು ಆಗಮಿಸಿದ ಪರಿಶೀಲನೆ ನಡೆಸಿ, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಅಪಘಾತ ಸಂಬಂಧ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ನನ್ನು ವಶಕ್ಕೆ ಪಡೆದಿದ್ದಾರೆ.