ವಿಶ್ರಾಂತ ಕುಲಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತೆ ಡಾ. ಮಲ್ಲಿಕಾ ಘಂಟಿ ವಿರುದ್ಧ ಎಫ್ ಐ ಆರ್ ದಾಖಲು!

ಕನ್ನಡ ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಡಿ ವಿಶ್ರಾಂತ ಕುಲಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಡಾ. ಮಲ್ಲಿಕಾ ಘಂಟಿ ವಿರುದ್ಧ ತಾಲೂಕಿನ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.
ಡಾ.ಮಲ್ಲಿಕಾ ಘಂಟಿ
ಡಾ.ಮಲ್ಲಿಕಾ ಘಂಟಿ

ಹೊಸಪೇಟೆ: ಕನ್ನಡ ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಡಿ ವಿಶ್ರಾಂತ ಕುಲಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಡಾ. ಮಲ್ಲಿಕಾ ಘಂಟಿ ವಿರುದ್ಧ ತಾಲೂಕಿನ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.

ಕನ್ನಡ ವಿವಿಯಲ್ಲಿ ಕುಲಪತಿಯಾಗಿದ್ದ ಡಾ. ಮಲ್ಲಿಕಾ ಘಂಟಿ 2015- 16, 2016-17ನೇ ಸಾಲಿನಲ್ಲಿ 1.69 ಕೋಟಿ ಮೊತ್ತದ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ ಸಂಸ್ಥೆಯಿಂದ ನಿರ್ವಹಿಸಲು ಆದೇಶಿಸುವ ಮೂಲಕ ಶೇ. 8ರಷ್ಟು ಸೇವಾ ಶುಲ್ಕ ಮೊತ್ತದ ರೂ.13.56 ಲಕ್ಷ ಆರ್ಥಿಕ ನಷ್ಟವನ್ನು ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಕನ್ನಡ ವಿವಿ ಕುಲಸಚಿವ ಡಾ. ಸುಬ್ಬಣ್ಣ ರೈ ನೀಡಿದ ದೂರಿನ ಮೇರೆಗೆ ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ಪ್ರಭಾವದಿಂದ ಅಂದು ಡಾ.ಮಲ್ಲಿಕಾ ಘಂಟಿ ಕುಲಪತಿಯಾಗಿದ್ದರು.

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ಪರಿಷತ್ ನಡೆಸಿದ್ದ ತನಿಖಾ ವರದಿಯನ್ನು ಆಧರಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಕನ್ನಡ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಜು.18 ರಂದು ನೀಡಿದ ಅನುಮೋದನೆ ಮೇರೆಗೆ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾಘಂಟಿ, ನಿವೃತ್ತ ಅಧಿಕಾರಿಗಳು ಹಾಗೂ ಸೇವೆಯಲ್ಲಿರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com