ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ನಿಗದಿತ ಉದ್ದೇಶಕ್ಕೆ ಬಳಕೆ: ಸಚಿವ ಎಚ್.ಸಿ. ಮಹಾದೇವಪ್ಪ

ಸರ್ಕಾರದ ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಐದು ಇಲಾಖೆಗಳು ಸೇರಿದಂತೆ 40 ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಹಣವನ್ನು ಹಂಚಲಾಗಿದೆ ಎಂದು ಸಚಿವ ಮಹಾದೇವಪ್ಪ ಸ್ಪಷ್ಟಪಡಿಸಿದ್ದಾರೆ.
ಎಚ್.ಸಿ ಮಹಾದೇವಪ್ಪ
ಎಚ್.ಸಿ ಮಹಾದೇವಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನದಲ್ಲಿ (ಎಸ್‌ಸಿಎಸ್‌ಪಿ– ಟಿಎಸ್‌ಪಿ) 11 ಸಾವಿರ ಕೋಟಿಯನ್ನು ಐದು ‘ಗ್ಯಾರಂಟಿ’ಗಳ ಜಾರಿಗಾಗಿ ಬಳಕೆ ಮಾಡುವ ಸರ್ಕಾರದ ಉದ್ದೇಶ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ ಎಂದು ಹೇಳಿರುವ ಸಚಿವ ಮಹಾದೇವಪ್ಪ ಯಾವುದೇ ಹಣ ವ್ಯತ್ಯಯವಾಗಿಲ್ಲ, ನಿಗಧಿತ ಉದ್ದೇಶಕ್ಕೆ ಬಳಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಐದು ಇಲಾಖೆಗಳು ಸೇರಿದಂತೆ 40 ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಹಣವನ್ನು ಹಂಚಲಾಗಿದೆ ಎಂದು ಅವರು ಹೇಳಿದರು.

2023-24ಕ್ಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿಗಾಗಿ ರೂ.34,293.69 ಕೋಟಿ ಕ್ರಿಯಾ ಯೋಜನೆಯನ್ನು ಸರ್ಕಾರ ಸೋಮವಾರ ಅನುಮೋದಿಸಿದೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

156 ವಸತಿ ಶಾಲೆಗಳು ಮತ್ತು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ 75 ಹಾಸ್ಟೆಲ್‌ಗಳ ಕಾಮಗಾರಿ ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿದೆ ಎಂದು ಬಿಜೆಪಿಯ ಹಿರಿಯ ನಾಯಕ ಗೋವಿಂದ್ ಕಾರಜೋಳ  ಆರೋಪಿಸಿದ್ದಾರೆ. 108 ವಸತಿ ಶಾಲೆಗಳಿಗೆ ಸರಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳಿಗಾಗಿ ಕೆಎಂಎಫ್ ತುಪ್ಪ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಎನ್ ರವಿಕುಮಾರ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯವು 2022 ರಲ್ಲಿ ಟಿಟಿಡಿಗೆ 13 ಲಕ್ಷ ಕೆಜಿ ತುಪ್ಪವನ್ನು ಮಾರಾಟ ಮಾಡಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಮಾಡಲು ವಿಫಲವಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com