ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳ ಮೇಲೆ ಕನ್ನಡ ಹೇರಿಕೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಿ ಸೋಮಶೇಖರ್ ಮತ್ತು ಇತರ 19 ಮಂದಿ ವಿವಿಧ ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಮತ್ತು ಶಿಕ್ಷಕರು ಈ ಕುರಿಸು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ನಿರಾಕರಿಸಿತು ಮತ್ತು ವಿಚಾರಣೆಯನ್ನು ಎರಡು ವಾರಗಳಿಗೆ ಮುಂದೂಡಿತು.

ಕರ್ನಾಟಕ ಭಾಷಾ ಕಲಿಕೆ ಕಾಯ್ದೆ, ನಿಯಮಗಳು ಮತ್ತು ಎನ್‌ಒಸಿ ನಿಯಮಗಳ ನಿಬಂಧನೆಗಳ ಸಂಯೋಜಿತ ಪರಿಣಾಮವೆಂದರೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿಗಳೊಂದಿಗೆ ಸಂಯೋಜಿತವಾಗಿರುವ ರಾಜ್ಯದ ಶಾಲೆಗಳು ಕನ್ನಡವನ್ನು ಪ್ರಥಮ, ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com