ಬೆಂಗಳೂರು: ಶಿವಾಜಿನಗರದಲ್ಲಿ ಕಟ್ಟಡ ಮೇಲಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್; ಮೃತರ ಸಂಖ್ಯೆ 3ಕ್ಕೆ ಏರಿಕೆ
ಬೆಂಗಳೂರು: ನಗರದ ಜನನಿಬಿಡ ಶಿವಾಜಿನಗರ ಬಸ್ ನಿಲ್ದಾಣದ ಬಳಿ ನಾಲ್ಕು ಅಂತಸ್ತಿನ ಕಟ್ಟಡದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟಿರುವ ದುರ್ಘಟನೆ ಕಳೆದ ರಾತ್ರಿ ಸಂಭವಿಸಿದೆ.
ಮೃತರನ್ನು ಅರುಲ್ (40), ಕೋಟಾ ನಾಗೇಶ್ವರ ರಾವ್ (32) ಮತ್ತು ಕರಣ್ ಥಾಪಾ (32) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಗ್ ರೈಸ್ ಮಾರಾಟ ಮಾಡುತ್ತಿದ್ದ ತಳ್ಳುಗಾಡಿ ಕಟ್ಟಡದ ಪಕ್ಕದ ಫುಟ್‌ಪಾತ್‌ನಲ್ಲಿತ್ತು. ಇದ್ದಕ್ಕಿದ್ದಂತೆ, ನೀರಿನ ಟ್ಯಾಂಕ್ ಮತ್ತು ಪ್ಯಾರಪೆಟ್ ಗೋಡೆಯ ಒಂದು ಭಾಗವು ಮಾರಾಟಗಾರರು ಮತ್ತು ಗ್ರಾಹಕರ ಮೇಲೆ ಕುಸಿದಿದೆ.
ಗಾಯಗೊಂಡ ಮೂವರನ್ನು ಹತ್ತಿರದಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅರುಲ್ ಮತ್ತು ಕೋಟಾ ನಾಗೇಶ್ವರ್ ರಾವ್ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕರಣ್ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ