ಇನ್ನು 24 ಗಂಟೆಯೊಳಗೆ ರಾಹುಲ್ ಗಾಂಧಿಗೆ ಮತ್ತೆ ಸಂಸದ ಸ್ಥಾನ ಸಿಗಬೇಕು, ಇಲ್ಲವಾದರೆ...! ಡಿಕೆಶಿ ಹೇಳಿದ್ದು ಹೀಗೆ...

'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಕೆಶಿ, ಪ್ರಿಯಾಂಕ್ ಖರ್ಗೆ
ಸಿಎಂ ಸಿದ್ದರಾಮಯ್ಯ, ಡಿಕೆಶಿ, ಪ್ರಿಯಾಂಕ್ ಖರ್ಗೆ

ಬೆಂಗಳೂರು: 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ಆದೇಶದಿಂದ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದುರ್ಬಲರ ಪರವಾದ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಮತ್ತಷ್ಟು ಬಲಬಂದಿದೆ. ಸತ್ಯ ಮೇವ ಜಯತೇ ಎಂದಿದ್ದಾರೆ.

ಮತ್ತೊಂಡೆದೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ನ್ಯಾಯಕ್ಕೆ ಗೆಲುವು ಸಿಕ್ಕಿದೆ. ಪ್ರಜಾಪ್ರಭುತ್ವದಲ್ಲಿ ದ್ವೇಷದ ರಾಜಕಾರಣಕ್ಕೆ ಜಾಗವಿಲ್ಲ ಎಂಬುದನ್ನು ದೇಶಕ್ಕೆ ಅತ್ಯುನ್ನತ ನ್ಯಾಯಾಲಯ ಸಂದೇಶ ನೀಡಿದೆ. ಗುಜರಾತ್ ಕೋರ್ಟ್ ತೀರ್ಪಿನ 24 ಗಂಟೆಯೊಳಗೆ ಹೇಗೆ ಸಂಸತ್ ನಿಂದ ರಾಹುಲ್ ಗಾಂಧಿ ಅವರನ್ನು ಹೊರ ಹಾಕಲಾಯಿತೋ ಅದೇ ರೀತಿಯಲ್ಲಿ ಈಗ ಸುಪ್ರೀಂ ತೀರ್ಪಿನ ನಂತರ 24 ಗಂಟೆಯೊಳಗೆ ಮತ್ತೆ ಅವರು ಸಂಸದರಾಗಬೇಕು. ಇಲ್ಲದಿದ್ದರೆ ಸ್ಪೀಕರ್ ಗೆ ತೊಂದರೆಯಾಗಲಿದೆ ಎಂದರು.

ಸುಪ್ರೀಂ ಕೋರ್ಟ್ ತೀರ್ಪು ಸತ್ಯ ಮತ್ತು ಸಂವಿಧಾನದ ಜಯ. ರಾಹುಲ್ ಗಾಂಧಿ ಅವರ ಪ್ರಾಮಾಣಿಕತೆ ಮತ್ತು ರಾಜಕೀಯತೆಯನ್ನು ಎತ್ತಿ ಹಿಡಿಯಲಾಗಿದೆ. ದ್ವೇಷದ ರಾಜಕಾರಣ ಮಾಡದಂತೆ ಬಿಜೆಪಿಗೆ ಇದು ಉತ್ತಮ ಪಾಠವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com