ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಿದೆ': ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

“ರಾಜ್ಯದಲ್ಲಿ ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು, ಹೃದಯದಂತಹ ಅಂಗಗಳಿಗೆ ಬೇಡಿಕೆ ಹೆಚ್ಚುತ್ತಿದ್ದರೂ ಅದರ ಲಭ್ಯತೆ ಬೇಡಿಕೆಗೆ ತಕ್ಕಂತೆ ಇಲ್ಲ. ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಿಸುವುದು ಅತ್ಯಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದರು.
ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಿದೆ': ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: “ರಾಜ್ಯದಲ್ಲಿ ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು, ಹೃದಯದಂತಹ ಅಂಗಗಳಿಗೆ ಬೇಡಿಕೆ ಹೆಚ್ಚುತ್ತಿದ್ದರೂ ಅದರ ಲಭ್ಯತೆ ಬೇಡಿಕೆಗೆ ತಕ್ಕಂತೆ ಇಲ್ಲ. ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಿಸುವುದು ಅತ್ಯಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದರು.

ರಾಷ್ಟ್ರೀಯ ಅಂಗಾಂಗ ದಾನ ದಿನ ಆಚರಣೆ ಪ್ರಯುಕ್ತ ಆರೋಗ್ಯ ಇಲಾಖೆಯು ನಗರದಲ್ಲಿ ಗುರುವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು ಮಾತನಾಡಿದರು.

‘ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಬೇಕು. ದಾನದ ಪ್ರಕ್ರಿಯೆ ಕಾನೂನು ಬಾಹಿರ ಆಗದಂತೆ ಕ್ರಮವಹಿಸಿ, ದಾನದ ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ವೈದ್ಯಕೀಯ ತಂತ್ರಜ್ಞಾನಗಳ ಪ್ರಗತಿಯೊಂದಿಗೆ ಜೀವ ಉಳಿಸುವ ಅಂಗಾಂಗಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ, ರಾಜ್ಯದಲ್ಲಿ ಅಂಗಾಂಗಗಳ ಕೊರತೆ ಬಹಳಷ್ಟಿದೆ.

5,200ಕ್ಕೂ ಅಧಿಕ ಮಂದಿ ಮೂತ್ರಪಿಂಡ ಕಸಿಗಾಗಿ ಕಾಯುತ್ತಿದ್ದಾರೆ. ಸರಿ ಹೊಂದುವ ಅಂಗಾಗ ಸಿಕ್ಕಲ್ಲಿ ಮಾತ್ರ ಅವರು ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ. ಮೂಢ ನಂಬಿಕೆಗಳಿಂದಾಗಿ ಅನೇಕರು ದಾನ ಮಾಡಲು ಹಿಂದೇಟು ಹಾಕುತ್ತಿದ್ದು, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಲು ಹಾಗೂ ಅಂಗಾಂಗ ದಾನಕ್ಕೆ ಸ್ವಯಂ ಪ್ರೇರಿತರಾಗಿ ಜನರು ಮುಂದಕ್ಕೆ ಬರಬೇಕು. ಸಾವಿನ ನಂತರವೂ, ನಮ್ಮ ಅಂಗಗಳು ಎಂಟು ಜನರಿಗೆ ಜೀವ ನೀಡಬಲ್ಲವು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅಂಗಾಂಗ ದಾನ ಮಾಡಿದ 151 ಕುಟುಂಬಗಳನ್ನು ಸನ್ಮಾನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com