ಹಾಸನ: ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಸಾವು!

ಹಾಸನದ ಅರಸೀಕೆರೆ ‌ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ಹಾಸನದ ಅರಸೀಕೆರೆ ‌ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. 

ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಚರಣ್ ಮೃತ ಬಾಲಕನಾಗಿದ್ದಾನೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನರನ್ನು ಡೆಂಗ್ಯೂ ಜ್ವರ ಕಾಡುತ್ತಿದ್ದರೂ ಸೋಂಕು ತಡೆಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬಾಲಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಚರಣ್ ಪೋಷಕರು ಚಿಕ್ಕಮಗಳೂರಿನಲ್ಲಿ ನೆಲೆಸಿದ್ದಾರೆ. ಹಾಸನಕ್ಕೆ ಬಂದು ಚಿಕ್ಕಮಗಳೂರಿಗೆ ಹೋದ ಬಳಿಕ ಚರಣ್ ಗೆ ಜ್ವರ ಬಂದಿತ್ತು. ಹೀಗಾಗಿ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚುವರಿ ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ಗೆ ಪೋಷಕರು ದಾಖಲಿಸಿದ್ದರು. ಅಲ್ಲಿಯೂ ಜ್ವರ ಕಡಿಮೆಯಾಗದಿದ್ದರಿಂದ ಬೆಂಗಳೂರಿಗೆ ಕರೆದೊಯ್ಯುವ ವೇಳೆ ಚರಣ್ ಮೃತಪಟ್ಟಿದ್ದಾನೆ.

ಚರಣ್ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ಹೊರಹಾಕಿರುವ ಗ್ರಾಮಸ್ಥರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮದಲ್ಲಿ ರೋಗ ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com