ರಾಜ್ಯ ಸರ್ಕಾರದ ಗ್ಯಾರಂಟಿ 'ಗೃಹ ಜ್ಯೋತಿ' ಯೋಜನೆ: ಖರ್ಗೆ ತವರು ಜಿಲ್ಲೆಯಲ್ಲಿ ಇಂದು ಸಿಎಂ ಅಧಿಕೃತ ಚಾಲನೆ 

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದು ಶನಿವಾರ ಆಗಸ್ಟ್ 5ರಂದು ಅಧಿಕೃತ ಚಾಲನೆ ಸಿಗಲಿದೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದು ಶನಿವಾರ ಆಗಸ್ಟ್ 5ರಂದು ಅಧಿಕೃತ ಚಾಲನೆ ಸಿಗಲಿದೆ.  

200 ಯೂನಿಟ್ ಒಳಗೆ ವಿದ್ಯುತ್ ವೆಚ್ಚ ಮಾಡುವ ಗ್ರಾಹಕರಿಗೆ ಈ ಯೋಜನೆ ಲಭ್ಯವಾಗುತ್ತಿದ್ದು, ಇಂದು ಕಲಬುರಗಿಯಲ್ಲಿ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ(Mallikarjuna Kharge) ಚಾಲನೆ ನೀಡಲಿದ್ದಾರೆ. 

ಗೃಹ ಜೋತಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಕಲಬುರಗಿ ನಗರದಲ್ಲಿ ಇಂಧನ ಇಲಾಖೆ ಆಯೋಜಿಸಿದೆ. ಉಚಿತ ಬೆಳಕು ಸುಸ್ಥಿರ ಬದುಕು ಎಂಬ ಘೋಷವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ, ನಗರದ ಎನ್ ವಿ ಮೈದಾನದಲ್ಲಿ ಗೃಹ ಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ. ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಕಾಂಗ್ರೆಸ್ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಕುಟುಂಬಕ್ಕೆ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವುದಾಗಿ ಹೇಳಿತ್ತು. ಜುಲೈ ಒಂದರಿಂದಲೇ ಯೋಜನೆ ಜಾರಿಯಾಗಿದ್ದು, ಜುಲೈ ತಿಂಗಳ ಬಿಲ್ ಹಲವರಿಗೆ ಉಚಿತವಾಗಿ ಬಂದಿದೆ. 

ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ: ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಇನ್ನೂರು ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಕಡೆಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಗೃಹ ಜೋತಿ ಯೋಜನೆಯಡಿ ರಾಜ್ಯದಲ್ಲಿ ಜುಲೈ 25 ರವರಗೆ ಒಂದು ಕೋಟಿ 41 ಲಕ್ಷ 23 ಸಾವಿರ ಜನರು ನೋಂದಣಿ ಮಾಡಿಕೊಂಡಿದ್ದು, ಅವರು ಯೋಜನೆಯ ಲಾಭ ಪಡೆಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com