ಆಸ್ತಿ ವಿವಾದ: ಪತ್ನಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!

ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಮಗನೊಬ್ಬ ಹತ್ಯೆ ಮಾಡಿರುವ ಘಟನೆಯೊಂದು ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಮಗನೊಬ್ಬ ಹತ್ಯೆ ಮಾಡಿರುವ ಘಟನೆಯೊಂದು ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ.

ಚಿನ್ನಮ್ಮ (60) ಮೃತ ಮಹಿಳೆಯಾಗಿದ್ದಾರೆ. ಈ ಸಂಬಂಧ ಮೊದಲ ಪುತ್ರ ರಾಘವೇಂದ್ರ ಹಾಗೂ ಇವರ ಪತ್ನಿ ಸುಧಾ ಅವರನ್ನು ಬಂಧಿಸಲಾಗಿದೆ.

ಕಳೆದ ವರ್ಷ ಪತಿ ಕಳೆದುಕೊಂಡಿದ್ದ ಚಿನ್ನಮ್ಮ, 2ನೇ ಮಗ ರಾಜೇಶ್ ಅವರಿಗೆ ಮದುವೆ ಮಾಡಿ, ಆಸ್ತಿಯನ್ನು ರಾಜೇಶ್ ಹಾಗೂ ರಾಘವೇಂದ್ರ ಇಬ್ಬರಿಗೂ ಸಮ ಭಾಗವಾಗಿ ಹಂಚಲು ನಿರ್ಧರಿಸಿದ್ದರು. ಈ ವಿಚಾರವಾಗಿ ಹಲವು ದಿನಗಳಿಂದ ಗಲಾಟೆ ನಡೆಯುತಿತ್ತು.

ಶನಿವಾರ ಬೆಳಗ್ಗೆ ಚಿನ್ನಮ್ಮ ಊರಿನ ಆಚೆ ಪೊರಕೆ ಕಡ್ಡಿ ಕಟಾವಿಗೆ ಹೋಗಿದ್ದಾರೆ. ಇದೇ ಅವಕಾಶ ಬಳಸಿಕೊಂಡ ರಾಘವೇಂದ್ರ ಮತ್ತು ಈತನ ಪತ್ನಿ ಸುಧಾ, ಚಿನ್ನಮ್ಮನನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಕೆಲ ಕಾಲ ಚಿನ್ನಮ್ಮ ಜೊತೆ ಜಗಳವಾಡಿ ಕೊನೆಗೆ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಪರಿಣಾಮ ತೀವ್ರವಾಗಿ ರಕ್ತಸ್ರಾವವಾಗಲು ಶುರುವಾಗಿದೆ ಈ ವೇಳೆ ಸ್ಥಳಕ್ಕೆ ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಾಗಲೇ ಚಿನ್ನಮ್ಮ ಮೃತಪಟ್ಟಿದ್ದಾರೆ,

ಈ ವಿಷಯ ತಿಳಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್​ ಠಾಣೆಯ ಸಿಬ್ಬಂದಿ ವೃದ್ಧೆ ಚಿನ್ನಮ್ಮನ ಮಗ ರಾಘವೇಂದ್ರ ಮತ್ತು ಸೊಸೆ ಸುಧಾಳನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com