ಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ನೌಕರ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್​ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ...
ತಿಪ್ಪೇಸ್ವಾಮಿ
ತಿಪ್ಪೇಸ್ವಾಮಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್​ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. 

ತಿಪ್ಪೇಸ್ವಾಮಿ ಅವರು ನಿನ್ನೆ ಹೊಸದುರ್ಗ ತಾಲೂಕಿನ ಜಾನಕಲ್ ಬಳಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕ ಎಂ.ಚಂದ್ರಪ್ಪ ಅವರ ಅಮಾನತು ಬೆದರಿಕೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಪ್ಪೇಸ್ವಾಮಿ ಅವರು ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದಾರೆ.

ಈ ಸಂಬಂಧ ಮೃತ ತಿಪ್ಪೇಸ್ವಾಮಿ ಪುತ್ರ ರಾಜಶೇಖರಪ್ಪ ಎನ್ನುವರು ಹೊಸದುರ್ಗ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ, ತಾಲೂಕು ಪಂಚಾಯಿತಿ ಇಓ ರವಿ ಹೆಸರು ಉಲ್ಲೇಖವಿಲ್ಲ. ಸ್ವತಃ ತಿಪ್ಪೇಸ್ವಾಮಿಯೇ ನಿರ್ದಿಷ್ಟವಾಗಿ ಶಾಸಕರ ಹೆಸರು ಬರೆದಿಟ್ಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಇದೀಗ ದೂರಿನಲ್ಲಿ ಅವರ ಹೆಸರು ಇಲ್ಲದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಮೂಲಕ ಎಲ್ಲರಿಗೂ ಕೊನೆಯ ಶಭಾಶಯಗಳು. ಪತ್ರ ಬರೆದ ಉದ್ದೇಶವೆನೆಂದರೆ ನಾನು ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದ್ವಿತಿಯ ದರ್ಜೆ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದೆ. ನಾನು ಸಾಯಲು ಕಾರಣವೇನೆಂದೆರೆ ಪಂಚಾಯಿತಿಯಲ್ಲಿ ಬಹಳ ಕಿರುಕುಳ ನೀಡುತ್ತಿದ್ದರು. ದಿನಾಂಕ 3-8-2023ರಂದು ಎಂಎಲ್​ಎ ಚಂದ್ರಪ್ಪನವರು, ನಿನ್ನನ್ನು ಅಮಾನತು ಮಾಡುಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಇಓ ರವಿ ಅವರು ಹಿಂಸೆ ಕೊಡುತ್ತಿದ್ದರು. ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಕಿರುಕುಳ ನೀಡುತ್ತಿದ್ದಿದ್ದು, ನನ್ನ ಸಾವಿಗೆ ಮೇಲೆ ತಿಳಿಸಿರುವ ಎಲ್ಲರೂ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ, ತಾ.ಪಂ ಇಓ ರವಿ ಹೆಸರು ಉಲ್ಲೇಖವಿಲ್ಲ. ಕೇವಲ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಎಂಬುವರ ವಿರುದ್ಧ ಕಿರುಕುಳ ದೂರು ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com