ಬಾಕಿ ಪಾವತಿಗೆ ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಗುತ್ತಿಗೆದಾರರ ಸವಾಲಿಗೆ ಡಿಕೆಶಿ ಹೇಳಿದ್ದೇನು?

ಬಿಬಿಎಂಪಿ ಗುತ್ತಿಗೆದಾರರ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಹಣಕ್ಕೆ ಬೇಡಿಕೆ‌ಯಿಡುತ್ತಿದ್ದಾರೆ. ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಿಬಿಎಂಪಿ ಗುತ್ತಿಗೆದಾರರು ಸವಾಲು ಹಾಕಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಹಣಕ್ಕೆ ಬೇಡಿಕೆ‌ಯಿಡುತ್ತಿದ್ದಾರೆ. ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಿಬಿಎಂಪಿ ಗುತ್ತಿಗೆದಾರರು ಸವಾಲು ಹಾಕಿದ್ದಾರೆ.

ನಿನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರ ಸಂಘ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಗುತ್ತಿಗೆದಾರರು ಡಿಕೆ ಶಿವಕುಮಾರ್ ವಿರುದ್ಧ ಮಾತನಾಡಿರಲಿಲ್ಲ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜೊತೆಗೆ ವಾಗ್ವಾದ ನಡೆಸಲಾಗಿತ್ತು. ಆಗ ಗುತ್ತಿಗೆದಾರ ಹೇಮಂತ್ ಎಂಬುವವರು ಬಾಕಿ ಬಿಲ್ ಪಾವತಿಗೆ ಹಣ ಕೇಳಿದ್ದಾರೆ. ಹಣ ಕೇಳಿಲ್ಲ ಎನ್ನುವುದಾದರೆ ಅವರು ನಂಬುವ ಅಜ್ಜಯ್ಯನ ಮಠಕ್ಕೆ ಬಂದು‌ ಪ್ರಮಾಣ ಮಾಡಲಿ. ಹಣ ಕೇಳಿದ್ದಾರೆ ಎಂದು ನಾನು‌‌ ಪ್ರಮಾಣ ಮಾಡುತ್ತೇನೆ ಎಂದು ಡಿಕೆಶಿ ವಿರುದ್ಧ ಮಾತನಾಡಿದರು.

ನ್ಯಾಯಯುತವಾಗಿ ಕೆಲಸ ಮಾಡಿದ್ದೇವೆ. ಕಮಿಷನರ್ ಮೇಲೆ ಯಾಕೆ ಆರೋಪ ಮಾಡ್ತಿರಾ, ಇಷ್ಟು ದಿನ ಅವರೇ ಅಲ್ವಾ ಬಿಲ್ ಪಾವತಿ ಮಾಡ್ತಿರೋದು, ಈಗ ಯಾಕೆ ಅವರು ಬಿಲ್ ತಡೆಯುತ್ತಾರೆ, ಅವರಿಗೆ ಬಿಲ್ ತಡೆ ಹಿಡಿಯುವಂತೆ ಹೇಳಿರೋದು ಯಾರು ಅವರ ಬಗ್ಗೆ ಮಾತನಾಡಿ. ಈಗ ಸಮಿತಿ ಮಾಡಿದ್ದಾರೆ, ಬಿಲ್ ಸ್ಯಾಂಕ್ಷನ್ ಮಾಡಿಸಿಕೊಳ್ಳುತ್ತೀರಾ?, ನಾವೇನು ಕಳ್ಳತನ ಮಾಡಿಲ್ಲ, ಕೋರ್ಟ್ ಗೆ ಹೋಗೋಣ. ನಾನು ಕೂಡ ಕಾಂಗ್ರೆಸ್ ಗೆ ಓಟ್ ಹಾಕಿದವನು, 94 ಕೋಟಿ ಬಿಲ್ ಬಾಕಿ ಬಿಲ್ ಬರಬೇಕಿದೆ” ಎಂದು ಹೇಮಂತ್ ಆಕ್ರೋಶ ವ್ಯಕ್ತಪಡಿಸಿದ್ದರು.

ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬಾಕಿ ಬಿಲ್ ಪಾವತಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಗುತ್ತಿಗೆದಾರರ ಆರೋಪಕ್ಕೆ ಸಂಬಂಧಿಸಿದಂತೆ ಇದಕ್ಕೆ ಸ್ವತಃ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ಯಾರಿಗೂ ಉತ್ತರ ಕೊಡಲ್ಲ. ನನಗೂ ಪ್ರಜ್ಞೆ ಇದೆ. ನನಗೂ ರಾಜಕಾರಣ ಗೊತ್ತಿದೆ. ಯಾವ ಗುತ್ತಿಗೆದಾರನ ಹಿಂದೆ ಯಾರಿದ್ದಾರೆಂದು ನನಗೂ ಗೊತ್ತಿದೆ.

ಯಾವ ಬ್ಲ್ಯಾಕ್​​ಮೇಲ್ ಕೂಡ ನನ್ನ ಮುಂದೆ ನಡೆಯುವುದಿಲ್ಲ. ನಾವು ವಿಪಕ್ಷದಲ್ಲಿದ್ದಾಗ ನಮ್ಮ ಬಳಿ ಹುಡುಕಿಕೊಂಡು ಬರುತ್ತಿರಲಿಲ್ವಾ? ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ. ಇಲ್ಲದಿದ್ದರೆ ಆಗುವುದಿಲ್ಲ. ಯಾರಿಗೋ ಬ್ಲ್ಯಾಕ್​ಮೇಲ್ ಮಾಡಿದಂತೆ ನನಗೆ ಮಾಡಲು ಬರಬೇಡಿ ಎಂದು ಖಡಕ್​ ಆಗಿ ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com