ವೈದ್ಯಕೀಯ ವಿದ್ಯಾರ್ಥಿಗಳು
ವೈದ್ಯಕೀಯ ವಿದ್ಯಾರ್ಥಿಗಳು

ನರ್ಸ್‌ಗಳ ಮೇಲೆ ಅವಹೇಳನಕಾರಿ ರೀಲ್ಸ್: 11 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು!

ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.
Published on

ಹುಬ್ಬಳ್ಳಿ: ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಆವರಣದಲ್ಲಿ ಈ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಆರೋಪಿ ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತುಗೊಳಿಸಿ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಆದೇಶ ಹೊರಡಿಸಿದ್ದಾರೆ.

ನರ್ಸ್‌ಗಳನ್ನು ಕೆಟ್ಟದಾಗಿ ಮತ್ತು ಅವಮಾನಕರ ರೀತಿಯಲ್ಲಿ ಚಿತ್ರಿಸುವ ರೀಲ್‌ಗಳನ್ನು ಅವರ ಅನುಮತಿಯಿಲ್ಲದೆ ಮಾಡಲಾಗಿದೆ. ಜನಪ್ರಿಯ ಕನ್ನಡ ಚಲನಚಿತ್ರ ಹಾಡಿನ ಸಂಗೀತವನ್ನು ಸೇರಿಸಿ ಈ ವೀಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಹುಡುಗಿಯರನ್ನು ನಂಬಬಾರದು, ನರ್ಸ್‌ಗಳನ್ನು ನಂಬಬಾರದು ಎಂಬ ಸಾಲುಗಳಿದ್ದು ಈ ಹಾಡಿಗೆ ಹುಡುಗರೂ ನೃತ್ಯ ಸಹ ಮಾಡಿದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಕಿಮ್ಸ್ ನ ನರ್ಸ್ ಗಳು ಆರೋಪಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ತೀವ್ರ ಟೀಕೆಗೆ ಗುರಿಯಾದ ನಂತರ, ಅಮಾನತುಗೊಂಡ ವಿದ್ಯಾರ್ಥಿಗಳು ಮತ್ತೊಂದು ವೀಡಿಯೊ ಮಾಡಿ ನರ್ಸ್‌ಗಳನ್ನು ಕ್ಷಮೆಯಾಚಿಸಿದರು. ಅಲ್ಲದೆ ಇದನ್ನು ತಮಾಷೆಗಾಗಿ ಮಾಡಿದ್ದಾಗಿ ಸ್ಪಷ್ಟಪಡಿಸಿದರು.

ಈ ರೀಲ್ಸ್ ರಾಜ್ಯಾದ್ಯಂತ ನರ್ಸ್ ಬಂಧುಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕರು ವಿಡಿಯೋ ಖಂಡಿಸಿ ಪ್ರತಿಭಟನೆ ನಡೆಸಿದ್ದರು.

ವಿಡಿಯೋವನ್ನು ಖಂಡಿಸಿ ರಾಜ್ಯ ದಾದಿಯರ ಸಂಘವು ಈ ಸಂಬಂಧ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆದು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com