ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಮನಗರ: ಬೈಕ್ ಗೆ ನಗರಸಭೆ ಆಯುಕ್ತರ ಕಾರು ಡಿಕ್ಕಿ, ಮಹಿಳೆ ಸಾವು

ನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರ: ನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಪಘಾತ ಸಂಭವಿಸಿದ್ದು ಬೈಕ್ ನ ಹಿಂಬದಿಯಲ್ಲಿ ಕುಳಿತ್ತಿದ್ದ ಸಿದ್ದಿಕ್ ಅಂಜುಮ್(22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಅವರನ್ನು ರಾಮನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಬೈಕ್ ಗೆ ಆಯುಕ್ತ ನಾಗೇಶ್ ಅವರ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಮೃತಪಟ್ಟ ಮಹಿಳೆಯ ಶವವನ್ನು ರಾಜ ರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು. ನಗರಸಭೆ ಆಯುಕ್ತ ನಾಗೇಶ್ ಅವರ ಕಾರನ್ನು ರಾಮನಗರ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

X
Kannada Prabha
www.kannadaprabha.com