ಅನುಮಾನವಿದ್ದರೇ ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ; ಧರ್ಮ ಉಳಿಯಬೇಕು ಅಷ್ಟೇ!

ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ. ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ಪ್ರಕಾಶ್ ರೈ
ಪ್ರಕಾಶ್ ರೈ

ಶಿವಮೊಗ್ಗ : ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ. ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.

ಶಿವಮೊಗ್ಗ ನಗರದಲ್ಲಿ  ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಉಜಿರೆಯಲ್ಲಿ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮದ ಸೋಗಿನವರು ತಪ್ಪು ಮಾಡಿದರೆ ಅದನ್ನು ತನಿಖೆ ಮಾಡುವುದು ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹ ಕೇಳಿ ಬರುತ್ತಿದೆ. ಇದು ತನಿಖೆಯ ಭಾಗವಾಗಿದ್ದರೆ, ನಿಜಾಂಶ ತಿಳಿಯುವ ಅವಶ್ಯಕತೆ ಇದ್ದರೆ ಮಾಡಲಿ. ಈ ಬಗ್ಗೆ ನನ್ನ ಆಕ್ಷೇಪವೇನೂ ಇಲ್ಲ. ಧರ್ಮಸ್ಥಳ, ಧರ್ಮ ಬಿಡಿ ಎಂದು ನಾನು ಹೇಳಲು ಬರುವುದಿಲ್ಲ. ಆದರೆ, ಕೊನೆಯದಾಗಿ ಧರ್ಮ ಉಳಿಯಬೇಕು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com