ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲೆಂದು ತನಿಖಾ ಸಮಿತಿ ರಚನೆ: ಭೈರತಿ ಬಸವರಾಜ್

ರಾಜ್ಯ ಕಾಂಗ್ರೆಸ್ ಸರ್ಕಾರವು 2019 ರಿಂದ 2022 ರವರೆಗಿನ ಕಾಮಗಾರಿಗಳು ಮತ್ತು ಬಿಲ್‌ಗಳ ತನಿಖೆಗಾಗಿ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.
ಭೈರತಿ ಬಸವರಾಜ್
ಭೈರತಿ ಬಸವರಾಜ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು 2019 ರಿಂದ 2022 ರವರೆಗಿನ ಕಾಮಗಾರಿಗಳು ಮತ್ತು ಬಿಲ್‌ಗಳ ತನಿಖೆಗಾಗಿ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

ಸಮಿತಿ ರಚಿಸಿದ ಮೂರು ದಿನಗಳ ನಂತರ, ಬಿಜೆಪಿ ನಾಯಕರು ಇದನ್ನು ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 2019ರಲ್ಲಿ ಬಿಜೆಪಿ ಸೇರಿ ಸಚಿವರಾದ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್, 2013ರಿಂದ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆಯೂ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿದ ಶಾಸಕರ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು ಶಾಸಕ ಮುನಿರತ್ನ ನಾಯ್ಡು ಅವರ ಆಪ್ತ ಜಾಲಹಳ್ಳಿ ವೆಂಕಟೇಶ್ ಹೇಳಿದ್ದಾರೆ.

ನಮ್ಮ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಭಾಗದ ಪಾವತಿಯನ್ನು ಇತ್ಯರ್ಥಗೊಳಿಸಲು 675 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಸರ್ಕಾರವು ಗುತ್ತಿಗೆದಾರರಿಗೆ ಸಹಾಯ ಮಾಡುವುದಾಗಿ ಹೇಳಿತ್ತು ಆದರೆ ಈಗ ತನ್ನ ಭರವಸೆಯಿಂದ ಹಿಂದೆ ಸರಿಯುತ್ತಿದೆ ಮತ್ತು 2019 ರಿಂದ 2022 ರವರೆಗಿನ ಕಾಮಗಾರಿಗಳನ್ನು ತನಿಖೆ ಮಾಡಲು ಸಮಿತಿಯನ್ನು ರಚಿಸಿದೆ. ಬಿಜೆಪಿ ಶಾಸಕರ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಭೈರತಿ ಬಸವರಾಜ್ ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಆರ್‌ಆರ್‌ನಗರ ಶಾಸಕ ಮುನಿರತ್ನ ನಾಯ್ಡು, ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಮತ್ತು ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು  ಜಾಲಹಳ್ಳಿ ವೆಂಕಟೇಶ್ ಆರೋಪಿಸಿದ್ದಾರೆ.

ಈ ಹಿಂದೆ ಆರ್‌ಆರ್‌ನಗರ ವಿಧಾನಸಭೆಯಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈಗ, ತನಿಖೆಗೆ ಒಳಪಡುವ ಹೆಚ್ಚಿನ ಕಾಮಗಾರಿಗಳು ಈ ಅಸೆಂಬ್ಲಿ ವಿಭಾಗಗಳಿಂದ ಬಂದಿವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಆರ್‌ಆರ್‌ನಗರ ವಿಧಾನಸಭೆಯಲ್ಲಿ ಬಿಜೆಪಿ ನಾಯಕರನ್ನು ದುರ್ಬಲಗೊಳಿಸಲು ಬಯಸಿದ್ದಾರೆ, ಏಕೆಂದರೆ ಇದು ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಸಹಾಯ ಮಾಡುತ್ತದೆ, ವಿಧಾನಸಭೆಯು ಬೆಂಗಳೂರು ಗ್ರಾಮಾಂತರ ಲೋಕಸಭೆಯ ವ್ಯಾಪ್ತಿಗೆ ಬರುತ್ತದೆ ಎಂದು ಆರ್‌ಆರ್‌ನಗರದ ಮತ್ತೊಬ್ಬ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 5 ರಂದು, ಹಿರಿಯ ಐಎಎಸ್ ಅಧಿಕಾರಿಗಳಾದ ಉಜ್ವಲ್ ಕುಮಾರ್ ಘೋಷ್, ಪಿಸಿ ಜಾಫರ್, ಆಮ್ಲನ್ ಆದಿತ್ಯ ಬಿಸ್ವಾಸ್ ಮತ್ತು ಡಾ ಆರ್ ವಿಶಾಲ್ ಅವರ ನೇತೃತ್ವದಲ್ಲಿ ಸರ್ಕಾರವು 2019 ಮತ್ತು 2022 ರ ನಡುವಿನ ಕಾಮಗಾರಿಗಳನ್ನು ತನಿಖೆ  ನಡೆಸಲು ಹಾಗೂ 30 ದಿನಗಳಲ್ಲಿ ವರದಿ ಸಲ್ಲಿಸಲು ನಾಲ್ಕು ಸಮಿತಿಗಳನ್ನು ರಚಿಸಿದೆ.

ಘನತ್ಯಾಜ್ಯ ನಿರ್ವಹಣೆ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳು, ಆಪ್ಟಿಕ್ ಫೈ ಬರ್ ಕೇಬಲ್ ಅಳವಡಿಕೆಗೆ ಅನುಮತಿ, ಕೆರೆಗಳು ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಈ ಅಧಿಕಾರಿಗಳ ನೇತೃತ್ವದ ಸಮಿತಿಗಳು ತನಿಖೆ ನಡೆಸುತ್ತವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com