ಚಾಮರಾಜನಗರ: ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದ ಬಾಲಕಿ, ಆಸ್ಪತ್ರೆ ತಲುಪುವ ಮುನ್ನವೇ ಸಾವು

ಚಾಮರಾಜನಗರ ಜಿಲ್ಲೆಯ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ(10 ನೇ ತರಗತಿ) ವಿದ್ಯಾರ್ಥಿನಿಯೊಬ್ಬರು ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ(10 ನೇ ತರಗತಿ) ವಿದ್ಯಾರ್ಥಿನಿಯೊಬ್ಬರು ರಾಷ್ಟ್ರಗೀತೆ ಹಾಡುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೃತ ಬಾಲಕಿಯನ್ನು ನಿರ್ಮಲಾ ಶಾಲೆಯ ವಿದ್ಯಾರ್ಥಿನಿ 15 ವರ್ಷದ ಪೆಲಿಸಾ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಪ್ರಾರ್ಥನೆ ನಡೆಯುತ್ತಿದ್ದಾಗ ಪೆಲಿಸಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾರಿ ಮಧ್ಯೆಯೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೆಲಿಸಾ ಅನಾಥ ಬಾಲಕಿಯಾಗಿದ್ದು, ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಾಲೆಯ ಆಡಳಿತ ಮಂಡಳಿ ಹಾಗೂ ಆಕೆಯ ಸ್ನೇಹಿತರ ಹೇಳಿಕೆಯನ್ನು ಇನ್ನೂ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com