ಕಲುಷಿತ ನೀರು ಪ್ರಕರಣ: ಉನ್ನತಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟಿರುವ ಪ್ರಕರಣದಲ್ಲಿ ಲೋಕಾಯುಕ್ತ ಉನ್ನತ ಮಟ್ಟದ ಅಧಿಕಾರಿಗಳಿಗೆ ಆ.24 ಕ್ಕೆ ಹಾಜರಾಗಲು ಸಮನ್ಸ್ ಕಳಿಸಿದೆ.
ಕರ್ನಾಟಕ ಲೋಕಾಯುಕ್ತ
ಕರ್ನಾಟಕ ಲೋಕಾಯುಕ್ತ

ಚಿತ್ರದುರ್ಗ: ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟಿರುವ ಪ್ರಕರಣದಲ್ಲಿ ಲೋಕಾಯುಕ್ತ ಉನ್ನತ ಮಟ್ಟದ ಅಧಿಕಾರಿಗಳಿಗೆ ಆ.24 ಕ್ಕೆ ಹಾಜರಾಗಲು ಸಮನ್ಸ್ ಕಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ನ್ಯಾ. ಬಿಎಸ್ ಪಾಟೀಲ್ ಹೇಳಿದ್ದಾರೆ.

ಸಂಬಂಧಪಟ್ಟ ಇಲಾಖೆಯಿಂದ ವರದಿಯನ್ನೂ ಲೋಕಾಯುಕ್ತರು ಕೇಳಿದ್ದಾರೆ.  ಬೆಂಗಳೂರಿನಿಂದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಚಿತ್ರದುರ್ಗ ಜಿಲ್ಲಾಧಿಕಾರಿ, ಚಿತ್ರದುರ್ಗ ನಗರಸಭೆಯ ಆಡಳಿತ ನಿರ್ದೇಶಕರು, ಜಿಲ್ಲಾ ಆರೋಗ್ಯಾಧಿಕಾರಿ, ಪಾಲಿಕೆ ಆಯುಕ್ತರು, ಎಇಇ ಹಾಗೂ ಆರೋಗ್ಯ ನಿರೀಕ್ಷಕರನ್ನು ಲೋಕಾಯುಕ್ತ ಕಚೇರಿಗೆ ಆ.24 ಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶವನ್ನು ವರದಿಯೊಂದಿಗೆ ತಮ್ಮ ಕಚೇರಿಯಲ್ಲಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಈ ವರೆಗೂ 185 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜುಲೈ 31 ರಂದು ನೀರು ಕಲುಷಿತಗೊಂಡ ಘಟನೆ ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com