ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಜಿಲ್ಲಾಧಿಕಾರಿ ಎಂಎಸ್ ದಿವಾಕರ್ ಸೇರಿದಂತೆ ಇತರರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಜಿಲ್ಲಾಧಿಕಾರಿ ಎಂಎಸ್ ದಿವಾಕರ್ ಸೇರಿದಂತೆ ಇತರರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ವಿಜಯನಗರ: ಇಲ್ಲಿನ ಹಾಸ್ಟೆಲ್‌ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

ಹಾಸ್ಟೆಲ್‌ನಲ್ಲಿ ರಾತ್ರಿ ಊಟಕ್ಕೆ ಚಿಕನ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಮಧ್ಯರಾತ್ರಿ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. ಬಳಿಕ ವಿದ್ಯಾರ್ಥಿನಿಯರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧ್ಯರಾತ್ರಿ 28 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಇನ್ನೂ ನಾಲ್ವರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ಆಸ್ಪತ್ರೆಗೆ ದಾಖಲಾದವರ ಒಟ್ಟು ಸಂಖ್ಯೆ 32ಕ್ಕೆ ತಲುಪಿದೆ. ಇವರಲ್ಲಿ ಆರು ಮಂದಿ ಚೇತರಿಸಿಕೊಂಡಿದ್ದು, ಉಳಿದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ಟಿ ಹಾಸ್ಟೆಲ್‌ನಲ್ಲಿ 148 ವಿದ್ಯಾರ್ಥಿಗಳು ಇದ್ದಾರೆ. ಈ ಪೈಕಿ ಬುಧವಾರ ರಾತ್ರಿ 131 ವಿದ್ಯಾರ್ಥಿಗಳು ಮಾಂಸಾಹಾರ ಸೇವಿಸಿದ್ದು, 17 ವಿದ್ಯಾರ್ಥಿಗಳು ಸಸ್ಯಾಹಾರ ಸೇವಿಸಿದ್ದಾರೆ. ರಾತ್ರಿ ಊಟ ಮುಗಿಸಿ ನಿದ್ದೆಗೆ ಜಾರಿದ್ದರು. ಈ ವೇಳೆ ರಾತ್ರಿ 2ಗಂಟೆ ಸುಮಾರಿಗೆ ವಿದ್ಯಾರ್ಥಿಗಳಿಗೆ ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ.

ಘಟನೆಗೆ ನಿಖರ ಕಾರಣ ತಿಳಿಯಲು ವಿದ್ಯಾರ್ಥಿನಿಯರ ರಕ್ತದ ಮಾದರಿಗಳನ್ನು ಸಂಗ್ರಹಿಸಲು ಅಧಿಕಾರಿಗಳು ಸೂಚಿಸಿದ್ದಾರೆ. ಕೋಳಿ ಮಾಂಸದ ಮಾದರಿಯನ್ನೂ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. 

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಯೋಗಕ್ಷೇಮ ವಿಚಾರಿಸಿದರು. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಿವಾಕರ್ ತಿಳಿಸಿದ್ದಾರೆ.

ಸಸ್ಯಾಹಾರ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಈ ಸಂಬಂಧ ತನಿಖೆ ಕೈಗೆತ್ತಿಕೊಳ್ಳಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com