ಬಿಬಿಎಂಪಿ ಬಿಲ್‌ ಪಾವತಿ ಬಾಕಿ: ನಮಗೆ ನ್ಯಾಯ ಕೊಡಿಸಿ; ಯಡಿಯೂರಪ್ಪ ಭೇಟಿಯಾಗಿ ಗುತ್ತಿಗೆದಾರ ಅಳಲು!

ಮೊನ್ನೆಯಷ್ಟೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘವು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಮಾಡಿತು.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಮೊನ್ನೆಯಷ್ಟೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘವು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಮಾಡಿತು.

ಗುತ್ತಿಗೆ ನೀಡುವಲ್ಲಿ ಬಿಜೆಪಿ ಶೇ.40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು, ಗುತ್ತಿಗೆದಾರರ ಪರವಾಗಿ ಸರ್ಕಾರದೊಂದಿಗೆ ಮಾತನಾಡಿ ಬಿಲ್ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕದ ಉನ್ನತ ಬಿಜೆಪಿ ನಾಯಕರ ಜೊತೆ ನಡೆಸಿದ ಸಭೆ ಮಹತ್ವ ಪಡೆದಿದೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ಪಾಲಿಕೆ ಮತ್ತು ಸರ್ಕಾರದಿಂದ ಪಾವತಿ ವಿಳಂಬದಿಂದ ಗುತ್ತಿಗೆದಾರರು ಎದುರಿಸುತ್ತಿರುವ ಅನಿಶ್ಚಿತ ಪರಿಸ್ಥಿತಿಯನ್ನು ಸರ್ಕಾರಕ್ಕೆ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ನಿನ್ನೆ ರಾಜ್ಯಪಾಲರು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೆವು, ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇವೆ.

ಸರಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತನಾಡಿ, ಕಳೆದ 26 ತಿಂಗಳಿಂದ ಬಾಕಿ ಉಳಿದಿರುವ ಬಿಲ್‌ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಮಂಜುನಾಥ್ ಹೇಳಿದರು.

ಬಾಕಿ ಇರುವ ಬಿಲ್‌ಗಳನ್ನು ಮಂಜೂರು ಮಾಡುವವರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಹೋರಾಟ ಮುಂದುವರಿಸುವುದಾಗಿ ಹೇಳಿದರು. ಭ್ರಷ್ಟಾಚಾರದ ಬಗ್ಗೆ ಡಿ.ಕೆ.ಶಿವಕುಮಾರ್ ವಿರುದ್ಧ ಸಂಘ ಯಾವುದೇ ಆರೋಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

"ಕೆಲವು ಗುತ್ತಿಗೆದಾರರು ವಯಕ್ತಿಕವಾಗಿ ಪ್ರತಿಕ್ರಿಯಿಸುತ್ತಿದ್ದಾರೆ ಮತ್ತು ಇದು ಸಂಘದ ದೃಷ್ಟಿಕೋನವಲ್ಲ. ನಾವು ಯಾವುದೇ ವಿವಾದದಲ್ಲಿ ಭಾಗಿಯಾಗಲು ಬಯಸುವುದಿಲ್ಲ ಮತ್ತು ನಮ್ಮ ಗಮನವು ನಮ್ಮ ಬಿಲ್‌ಗಳನ್ನು ತೆರವುಗೊಳಿಸಲು ಮಾತ್ರ, ಎಂದು ಮಂಜುನಾಥ್ ಹೇಳಿದರು.

ಬಿಬಿಎಂಪಿ ಗುತ್ತಿಗೆದಾರರ ಸಂಘ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರನ್ನು ಭೇಟಿ ಮಾಡಿರುವುದನ್ನು ಗಮನಿಸಿದರೆ ರಾಜಕೀಯ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com