ಯಾದಗಿರಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ!

ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ  ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿ ಮೇಲ್ಛಾವಣಿ ಕುಸಿತ
ಅಂಗನವಾಡಿ ಮೇಲ್ಛಾವಣಿ ಕುಸಿತ

ಯಾದಗಿರಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 10 ತಿಂಗಳ ಮಗುವಿಗೆ ಗಾಯಗೊಂಡಿರುವ ಘಟನೆ  ಗುರುವಾರ ಯಾದಗಿರಿ ಜಿಲ್ಲೆಯ ಮರಕಲ್ ಗ್ರಾಮದಲ್ಲಿ ನಡೆದಿದೆ.

ಅಂಗನವಾಡಿ ಕೇಂದ್ರದಲ್ಲಿ ಶಿಶುಗಳಿಗೆ ಇಂದ್ರಧನುಷ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಧಿಕಾರಿಗಳು ಆಯೋಜಿಸಿದ್ದರು. ಅಂಗನವಾಡಿ ಕೇಂದ್ರಕ್ಕೆ ಲಸಿಕೆ ಹಾಕಿಸಲು ಮಗುವಿನ ಜೊತೆ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದೆ.

ಗಾಯಗೊಂಡ ಮಗು ತಲೆಗೆ ಬ್ಯಾಂಡೇಜ್ ಹಾಕಿಕೊಂಡು ನಗುತ್ತಿರುವ ಮಗುವಿನ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದ್ರಧನುಷ್ ಕಾರ್ಯಕ್ರಮದಲ್ಲಿ ಡಿಫ್ತೀರಿಯಾ, ನಾಯಿಕೆಮ್ಮು, ನ್ಯುಮೋನಿಯಾಕ್ಕೆ ಕಾರಣವಾಗುವ ಹಿಮೋಫಿಲಸ್ ಇನ್ಫ್ಲುಯೆಂಜಾ ಟೈಪ್ ಬಿ ಮತ್ತು ಇತರ ಎಂಟು ಮಾರಣಾಂತಿಕ ಕಾಯಿಲೆಗಳ ವಿರುದ್ಧ ಲಸಿಕೆ ಹಾಕಲಾಗುತ್ತದೆ.

10 ತಿಂಗಳ ಮಗು ಕೀರ್ತಿಯನ್ನು ಇತರ ಅನೇಕ  ಮಕ್ಕಳೊಂದಿಗೆ ಅಲ್ಲಿಗೆ ಕರೆದೊಯ್ಯಲಾಯಿತು. ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕೇಂದ್ರದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಆರಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂರು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com