ಬೆಂಗಳೂರು ವಿವಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಆ್ಯಪಲ್ ಮ್ಯಾಕ್‌ಬುಕ್‌ ವಿತರಣೆ

ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಬುಧವಾರ ಆ್ಯಪಲ್ ಮ್ಯಾಕ್‌ಬುಕ್ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಬುಧವಾರ ಆ್ಯಪಲ್ ಮ್ಯಾಕ್‌ಬುಕ್ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ.

ಹಣದ ಕೊರತೆಯಿಂದಾಗಿ ಕಳೆದ ಮೂರು ವರ್ಷಗಳಿಂದ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮರಳಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 1.39 ಕೋಟಿ ವೆಚ್ಚದಲ್ಲಿ ಒಟ್ಟು 171 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ.

ಪ್ರತಿ ಲ್ಯಾಪ್‌ಟಾಪ್ ಬೆಲೆ 99,900 ರೂ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿಯ ನಿಧಿಯನ್ನು ಬಳಕೆ ಮಾಡಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿದುಬಂದಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ 223 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ. ‘ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದರಿಂದ ವಿವಿಧ ಯೋಜನೆಗಳಡಿ ಎಲ್ಲಾ ಇಲಾಖೆಗಳ ಅನುದಾನ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದರೆ ಉನ್ನತ ಶಿಕ್ಷಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿದ್ಯಾರ್ಥಿಗಳ ಕಲ್ಯಾಣ ಯೋಜನೆಗಳಿಗೆ 223 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದೇನೆ. ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ವಿಶ್ವವಿದ್ಯಾನಿಲಯಗಳಲ್ಲಿ ಸಿಬ್ಬಂದಿ ಕೊರತೆಯ ಕುರಿತ ಪ್ರಶ್ನೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರವು ಎಲ್ಲಾ 2.5 ಲಕ್ಷ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಬದ್ಧವಾಗಿದೆ ಎಂದು ಹೇಳಿದರು.

ಉನ್ನತ ಶಿಕ್ಷಣದಲ್ಲಿ 15,000 ಕ್ಕೂ ಹೆಚ್ಚು ಹೊರಗುತ್ತಿಗೆ ಸಿಬ್ಬಂದಿಗಳಿದ್ದು, ನಮ್ಮ ಸರ್ಕಾರವು ಐದು ವರ್ಷಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com