
ಚಿತ್ರದುರ್ಗ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರಿಂದು ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿದ್ದ ಕವಾಡಿಗರ ಹಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದೇ ವೇಳೆ ಜನರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತರು, ಶೌಚಾಲಯ ಸೇರಿದಂತೆ ಸೂಕ್ತ ಮೌಲ ಸೌಲಭ್ಯ ಕಲ್ಪಿಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ತಾತ್ಕಾಲಿಕ ಆಸ್ಪತ್ರೆಗೂ ಭೇಟಿ ನೀಡಿದ ಲೋಕಾಯುಕ್ತರು, ಅಲ್ಲಿ ವೈದ್ಯರು ಇರದೆ, ಶುಶ್ರೂಷಕರು ಮಾತ್ರ ಇರುವುದನ್ನು ಕಂಡು ಗರಂ ಆದರು. ಜನರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ತಿಳಿಸಿದರು.
ನಂತರ ನಗರದ ವಿವಿಧೆಡೆ ಸಂಚರಿಸಿದ ನ್ಯಾಯಮೂರ್ತಿ, ಕಸದ ರಾಶಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡರು. ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಕಲುಷಿತ ನೀರು ಕುಡಿದು ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದರು.
Advertisement