ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ 3.16 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 3.16 ಲಕ್ಷ ರೂ. ಮೌಲ್ಯದ 6.33 ಕೆಜಿ ಒಣ ಗಾಂಜಾವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ವಶಪಡಿಸಿಕೊಂಡಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಪಾಲಕ್ಕಾಡ್ ರೈಲ್ವೆ ವಿಭಾಗದ ಅಪರಾಧ ತನಿಖಾ ದಳ ಹಾಗೂ ರಾಜ್ಯ ಅಬಕಾರಿ ಇಲಾಖೆಯೊಂದಿಗೆ ಆರ್‌ಪಿಎಫ್ ತಂಡವು ರೈಲುಗಳಲ್ಲಿ ತಪಾಸಣೆ ನಡೆಸುತ್ತಿದೆ.

ಗುರುವಾರ ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿಯೂ ತಪಾಸಣೆ ನಡೆಸಲಾಗಿದ್ದು, ಈ ವೇಳೆ ರೈಲಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಎಕ್ಸ್‌ಪ್ರೆಸ್ ರೈಲಿನ ಜನರಲ್ ಕೋಚ್‌ನಲ್ಲಿ ಗಾಂಜಾ ಇರುವ ಲಗೇಜ್ ಪತ್ತೆಯಾಗಿದೆ. ಆದರೆ, ಬ್ಯಾಗ್ ಯಾರದ್ದು ಎಂಬುದು ತಿಳಿದುಬಂದಿಲ್ಲ. ಇದರಂತೆ ಆರ್‌ಪಿಎಫ್ ಸಿಬ್ಬಂದಿ ಬ್ಯಾಗ್ ಅನ್ನು ವಶಪಡಿಸಿಕೊಂಡು, ಅಬಕಾರಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಈ ಸಂಬಂಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com