ರಾಯಚೂರು: ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಸನಗೌಡ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾದ ಬಸನಗೌಡ ಅವರ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಬಿಪಿ, ಶುಗರ್, ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದ ಬಸನಗೌಡ ಏಕಾಏಕಿ ಸಾವನ್ನಪ್ಪಿದ್ದಾರೆ.
Advertisement