ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ- ನಟ ಉಪೇಂದ್ರ

ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. . ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಬಂದಿದ್ದ ನಟ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದಿದ್ದರು.
ನಟ ಉಪೇಂದ್ರ
ನಟ ಉಪೇಂದ್ರ

ಬೆಂಗಳೂರು: ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. . ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಬಂದಿದ್ದ ನಟ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದಿದ್ದರು.

ಹೊಲಗೇರಿ ಪದ ಬಳಕೆ ಬಗ್ಗೆ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ನಟನನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದಾದ ಕೆಲವೇ ಗಂಟೆಗಳಲ್ಲಿ ಉಪೇಂದ್ರ ಕ್ಷಮೆ ಯಾಚಿಸಿದ್ದರು. ಆದರೆ, ಇಂದು ಸಹ ರಾಮನಗರದಲ್ಲಿ ಉಪ್ಪಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಜೊತೆಗೆ ಎರಡು ಪ್ರತ್ಯೇಕ ದೂರುಗಳು ದಾಖಲಾಗಿ. ಎಫ್​ಐಆರ್ ಸಹ ನೊಂದಣಿಯಾಗಿದೆ.

ಉಪೇಂದ್ರ ಅವರ ಹೇಳಿಕೆ ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಜೊತೆಗೆ ಬಿಆರ್ ಭಾಸ್ಕರ್ ರಾವ್ ಹಾಗೂ ಇನ್ನೂ ಕೆಲವರು ಹೊಸೂರು ಗೇಟ್ ಪೊಲೀಸ್ ಠಾಣೆಯಲ್ಲಿಯೂ ಉಪೇಂದ್ರ ವಿರುದ್ಧ ದೂರು ದಾಖಲು ಮಾಡಿದ್ದಾರೆ.

 ಪ್ರತಿಭಟನೆ, ಎರಡು ದೂರು ದಾಖಲಾದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ, 50 ವರ್ಷಗಳ ಹಿಂದೆ  ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com