ಖಾಸಗಿ ಸಂಸ್ಥೆಗಳ ಮೂಲಕ 500 ಚಾಲಕರ ನೇಮಕಕ್ಕೆ ಕೆಎಸ್‌ಆರ್‌ಟಿಸಿ ಮುಂದು!

ಸರ್ಕಾರಿ ಸಾರಿಗೆ ನಿಗಮಗಳಲ್ಲಿ ಚಾಲಕರ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳ ಮೂಲಕ 500 ಚಾಲಕರನ್ನು ನೇಮಕ ಮಾಡಿಕೊಳ್ಳಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರಿ ಸಾರಿಗೆ ನಿಗಮಗಳಲ್ಲಿ ಚಾಲಕರ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳ ಮೂಲಕ 500 ಚಾಲಕರನ್ನು ನೇಮಕ ಮಾಡಿಕೊಳ್ಳಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC), ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಒಟ್ಟು 15,000 ಕ್ಕೂ ಹೆಚ್ಚು ಸಿಬ್ಬಂದಿ ಕೊರತೆಯಿದೆ ಎಂದು ಬಸ್ ನಿಗಮದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಾರಿಗೆ ನಿಗಮಗಳಲ್ಲಿ ಚಾಲಕರು ಸೇರಿದಂತೆ ಇತರೆ ಸಿಬ್ಬಂದಿ ಕೊರತೆಗಳಿದ್ದು, ಇದರಿಂದಾಗಿ ಜೂನ್‌ ತಿಂಗಳಿನಿಂದ ಶಕ್ತಿ ಯೋಜನೆ ಪ್ರಾರಂಭವಾದ ನಂತರ ಪರಿಣಾಮಕಾರಿಯಾಗಿ ಸೇವೆಗಳ ತಲುಪಿಸುವುದು ಕಷ್ಟಕರವಾಗಿದೆ. ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ.

ಹಾಗಾಗಿ ಬಸ್ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) ಕೂಡಲೇ ಚಾಲಕರು ಬೇಕಾಗಿದ್ದು, ಇ-ಟೆಂಡರ್ ಪ್ರಕ್ರಿಯೆ ಮೂಲಕ ಖಾಸಗಿ ಏಜೆನ್ಸಿ ಮೂಲಕ ಚಾಲಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಏಜೆನ್ಸಿ ಮೂಲಕ ನೇಮಕಗೊಂಡ ಚಾಲಕರಿಗೆ ಯಾವುದೇ ಪ್ರೋತ್ಸಾಹ ಧನ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ನೇಮಕಗೊಂಡ ಚಾಲಕರನ್ನು ಕೂಡಲೇ ಬಸ್ ಗಳ ಚಲಾಯಿಸಲು ಅನುಮತಿ ನೀಡುವುದಿಲ್ಲ. ಅವರಿಗೆ ಹವಾರು ಸುತ್ತಿನ ಪರೀಕ್ಷೆ ನೀಡಲಾಗುತ್ತದೆ. ತರಬೇತಿಗಲೂ ಇರಲಿದೆ. ಈ ತರಬೇತಿಗಳು ಎರಡು ತಿಂಗಳ ಕಾಲ ನಡೆಯಲಿದೆ. ನಂತರ ರಾಜ್ಯಾದ್ಯಂತ ಇರುವ ಕೊರತೆಯ ಆಧಾರದ ಮೇಲೆ ಅವರನ್ನು ಮಂಗಳೂರು ಮತ್ತು ರಾಮನಗರದಂತಹ ವಿವಿಧ ವಿಭಾಗಗಳಿಗೆ ನಿಯೋಜಿಸಲಾಗುವುದು. 11 ತಿಂಗಳ ಅವಧಿಗೆ ಸುಮಾರು 500 ಚಾಲಕರನ್ನು ನೇಮಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com