ಭೂಮಿ ಕಳೆದುಕೊಂಡವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು: ಡಿಕೆ ಶಿವಕುಮಾರ್

ಭೂಮಿ ಕಳೆದುಕೊಂಡ ರೈತರಿಗೆ ಉತ್ತಮ ಬೆಲೆ ಸಿಗಬೇಕು. ಶಿವರಾಮ ಕಾರಂತ ಬಡಾವಣೆಯ ಬಳಿಯೇ ಐಟಿ ಹಬ್ ಅಭಿವೃದ್ಧಿಪಡಿಸಲು ಜಾಗ ಮೀಸಲಿಡಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ಹೇಳಿದರು.
ಯಲಹಂಕದ ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಭೇಟಿ ನೀಡಿ, ಬಡಾವಣೆ ನಿರ್ಮಾಣದ ನೀಲನಕ್ಷೆ ಪರಿಶೀಲಿಸಿದ ಡಿಕೆ.ಶಿವಕುಮಾರ್.
ಯಲಹಂಕದ ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಭೇಟಿ ನೀಡಿ, ಬಡಾವಣೆ ನಿರ್ಮಾಣದ ನೀಲನಕ್ಷೆ ಪರಿಶೀಲಿಸಿದ ಡಿಕೆ.ಶಿವಕುಮಾರ್.

ಬೆಂಗಳೂರು: ಭೂಮಿ ಕಳೆದುಕೊಂಡ ರೈತರಿಗೆ ಉತ್ತಮ ಬೆಲೆ ಸಿಗಬೇಕು. ಶಿವರಾಮ ಕಾರಂತ ಬಡಾವಣೆಯ ಬಳಿಯೇ ಐಟಿ ಹಬ್ ಅಭಿವೃದ್ಧಿಪಡಿಸಲು ಜಾಗ ಮೀಸಲಿಡಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ಹೇಳಿದರು.

ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯ ಪ್ರದೇಶದಲ್ಲಿ ಶನಿವಾರ ವೀಕ್ಷಣೆ ನಡೆಸಿದ ನಂತರ ಉಪಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಡಾವಣೆಗೆ ಸಂಬಂಧಿಸಿದಂತೆ ನಾವು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಮ್ಮ ತೀರ್ಮಾನಗಳ ಬಗ್ಗೆ ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿಯ ಜತೆಗೂ ಚರ್ಚಿಸಿದ್ದೇವೆ. ಬಿಡಿಎ ಅಧಿಕಾರಿಗಳು ತೀರ್ಮಾನ ಸಮಂಜಸವಾಗಿದೆ ಎಂದು ಒಪ್ಪಿದ್ದಾರೆ ಎಂದು ಹೇಳಿದರು.

‘ಕಂಠೀರವ ಕ್ರೀಡಾಂಗಣದ ಮಾದರಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ ಜಾಗ ನಿಗದಿಪಡಿಸಿದ್ದಾರೆ. ನಿಗದಿಪಡಿಸಿರುವ ಜಾಗದ ಬಗ್ಗೆ ನನಗೆ ಸಮಾಧಾನ ಇಲ್ಲ. 45 ಮೀಟರ್ ರಸ್ತೆ ಪಕ್ಕದಲ್ಲಿ ಉದ್ಯಾನಕ್ಕೆ ಸ್ಥಳ ಮೀಸಲಿಡಲಾಗಿದೆ. ಅಲ್ಲಿ ಕ್ರೀಡಾಂಗಣ ಇರಬೇಕು. ಮುಂದೆ ಮೆಟ್ರೊ ಬಂದರೆ ಅದರ ಹತ್ತಿರದಲ್ಲಿ ಕ್ರೀಡಾಂಗಣ ಇರಬೇಕು. ಕ್ರೀಡಾಂಗಣಕ್ಕೆ 25-45 ಎಕರೆ ಭೂಮಿ ಮೀಸಲಿಡಲಾಗಿದೆ’ ಎಂದು ಮಾಹಿತಿ ನೀಡಿದರು.

45 ಮೀಟರ್ ರಸ್ತೆ ಸಮೀಪ ಯಾರಿಗೂ ನಿವೇಶನ ನೇರ ಹಂಚಿಕೆ ಮಾಡಬಾರದು. ಇಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಭೂಮಿ ಬಳಕೆ ಆಗಬೇಕು. ಇದರಿಂದ ಬಿಡಿಎ ಹಾಗೂ ಸರ್ಕಾರಕ್ಕೆ ಲಾಭವಾಗುವಂತೆ ಇರಬೇಕು ಎಂದು ತಿಳಿಸಿದರು.

ನಿವೇಶನ ಹಂಚಿಕೆಗೆ ಮೊದಲ ಆದ್ಯತೆ ನೀಡಲಾಗುವುದು. ಆ ಬಳಿಕ ಉಳಿದ ಕೆಲಸ ಜಾರಿ ಆಗಬೇಕು. ಸದ್ಯಕ್ಕೆ 2,500 ಎಕರೆ ಜಾಗದಲ್ಲಿ ಕಾಮಗಾರಿ ನಡೆಯುತ್ತಿದೆ. ಉಳಿದ ಜಾಗದ ವಿಚಾರವಾಗಿ ಕಾನೂನು ತೊಡಕಿನ ಬಗ್ಗೆ ಚರ್ಚಿಸಲಾಗುತ್ತಿದೆ’ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com