ಎಳೆ ಪ್ರಾಯದಲ್ಲಿ ಇದೇನು ಹೊಸ ಸಮಸ್ಯೆ: ಬೆಳ್ತಂಗಡಿಯಲ್ಲಿ ತೀವ್ರ ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ಹೃದಯಾಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿನಿ
ಹೃದಯಾಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿನಿ

ಮಂಗಳೂರು: ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಿಂದ ಮರಣ ಹೊಂದುವ ಘಟನೆಗಳು ನಿಲ್ಲುತ್ತಲೇ ಇಲ್ಲ. ಕಳೆದ ವಾರ ಚಾಮರಾಜನಗರದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಹಾಡಲು ನಿಂತಿದಲ್ಲೇ ಕುಸಿದು ಬಿದ್ದು ಹೃದಯಾಘಾತಕ್ಕೀಡಾಗಿ ಮರಣ ಹೊಂದಿದ್ದಳು.

ಇದೀಗ ಮಂಗಳೂರು ಬಳಿ ಬೆಳ್ತಂಗಡಿಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಸುಮಾ ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ ಕೈ ಕೊಟ್ಟಿದ್ದು ಲೋ ಬಿಪಿಯಾಗಿ ಹೃದಯಾಘಾತವಾಗಿ ಸಾವು ಸಂಭವಿಸಿದೆ.

ಕೆಲ ದಿನಗಳ ಹಿಂದೆ ಸುಮ ಅನಾರೋಗ್ಯ ಎಂದು ಹೇಳಿ ಕಾಲೇಜಿಗೆ ರಜೆ ಹಾಕಿ ಮನೆಗೆ ಬಂದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಳು. ಮೊನ್ನೆ ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಆಗಸ್ಟ್ 11ರಂದು ಮತ್ತೆ ಆರೋಗ್ಯ ಹಾಳಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಳು. ಇನ್ನೇನು ಆರೋಗ್ಯ ಸರಿಯಾಯ್ತು ಎನ್ನವಷ್ಟುರಲ್ಲಿ ನಿನ್ನೆ ಸಂಜೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com