ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತೆರೆದ ಜೀಪ್​ನಲ್ಲಿ ಪರೇಡ್​ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು.

ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಭಾಷಣಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿತ್ತು. ಅದನ್ನು ಗಮನಿಸಿದ ಮುಖ್ಯಮಂತ್ರಿಗಳು, ಬುಲೆಟ್ ಪ್ರೂಫ್ ಗ್ಲಾಸ್ ತೆರವು ಮಾಡುವಂತೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸೂಚನೆ ಮೇರೆಗೆ ಅಧಿಕಾರಿಗಳು ಕೂಡಲೇ ಬುಲೆಟ್ ಪ್ರೂಫ್ ಗ್ಲಾಸ್ ತೆಗೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com