77ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು:  ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದ್ದರು. ಧ್ವಜಾರೋಹಣದ ಬಳಿ ಸಿಎಂ ಅನುಮತಿ ಪಡೆದು ಡಿಕೆ ಶಿವಕುಮಾರ್ ಭಾಷಣ ಮಾಡಿದರು.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com