ನಂದಿ ಬೆಟ್ಟ ರಸ್ತೆಯಲ್ಲಿ ಪುಂಡರ ಹುಚ್ಚಾಟ: ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ?

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೇವನಹಳ್ಳಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೈಕ್​ ವೀಲಿಂಗ್ ಪುಂಡರ ಹಾವಳಿ ಮೀತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಿದಂತೆ ಕಾಣುತ್ತಿದ್ದು, ವೀಲಿಂಗ್ ಮಾಡಲು ಹೋಗಿಯೇ ಅಪಘಾತವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು ಮೂಲದ ಆದಿಲ್ ( 25 ) ಮೃತ ಸವಾರ. ಆತನ ಮೃತದೇಹವನ್ನು ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com