ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು

ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.
ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು
ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.

ಇಬ್ಬರು ಕಾರ್ಪೊರೇಟರ್‌ಗಳು ತಮ್ಮ ಬೆಂಬಲಿಗರೊಂದಿಗೆ ಜಿಲ್ಲೆಯ ನಿಪ್ಪಾಣಿ ನಗರದ ಪುರಸಭೆಯ ಕಟ್ಟಡದ ಮೇಲೆ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನು ಹಾರಿಸಲು ಪ್ರಯತ್ನಿಸಿದರು.

ಬಿಜೆಪಿ ಸ್ಥಳೀಯ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಜಿಲ್ಲಾಡಳಿತದಿಂದ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಬಳಿಕ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ನಿಪ್ಪಾಣಿ ಪುರಸಭೆಯ ಕಾರ್ಪೊರೇಟರ್‌ಗಳಾದ ವಿನಾಯಕ ವಾಡೆ ಮತ್ತು ಸಂಜಯ ಸಂಗಾವ್ಕರ್ ಅವರು ಕೇಸರಿ ಧ್ವಜಗಳೊಂದಿಗೆ ಬಂದು ಅದನ್ನು ಹಾರಿಸಲು ಪ್ರಯತ್ನಿಸಿದರು. ಕಾರ್ಪೊರೇಟರ್‌ಗಳಿಗೆ ಎನ್‌ಸಿಪಿ ಪಕ್ಷ ಬೆಂಬಲ ನೀಡಿದೆ. 
ಈ ವೇಳೆ ಪೊಲೀಸರು ಕಾರ್ಪೊರೇಟರ್‌ಗಳನ್ನು ತಡೆದು ವಾಪಸ್ ಕಳುಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com